Leviticus 13:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಬ್ಬನ ದೇಹದ ಚರ್ಮದಲ್ಲಿ ಬೆಂಕಿಯಿಂದ ಸುಟ್ಟಗಾಯ ಉಂಟಾಗಬಹುದು. ಹಸಿಯಾದ ಚರ್ಮವು ಬೆಳ್ಳಗಾಗಿದ್ದರೆ, ಕೆಂಪುಬಿಳುಪು ಮಿಶ್ರವಾದ ಮಚ್ಚೆಯುಳ್ಳದ್ದಾಗಿದ್ದರೆ, ಯಾಜಕನು ಅದನ್ನು ಪರೀಕ್ಷಿಸಬೇಕು. ಆ ಬಿಳಿ ಕಲೆ ಚರ್ಮಕ್ಕಿಂತ ತಗ್ಗಾಗಿದ್ದರೆ ಮತ್ತು ಆ ಕಲೆಯಲ್ಲಿನ ರೋಮವು ಬೆಳ್ಳಗಾಗಿದ್ದರೆ, ಅದು ಕುಷ್ಠರೋಗವಾಗಿದೆ. ಆ ಕುಷ್ಠವು ಸುಟ್ಟಗಾಯದಲ್ಲಿ ಹುಟ್ಟಿದ್ದಾಗಿದೆ. ಆಗ ಯಾಜಕನು ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ಕುಷ್ಠರೋಗವಾಗಿದೆ. (Verses 24-25)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಒಬ್ಬನ ದೇಹದ ಚರ್ಮದಲ್ಲಿ ಬೆಂಕಿಯಿಂದುಂಟಾದ ಬೊಬ್ಬೆ ಇರಲಾಗಿ ಆ ಬೊಬ್ಬೆಯ ಸ್ಥಳವು ಹೊಳೆಯುವ ಕಲೆಯಾಗಿ ಬೆಳ್ಳಗಾಗಿಯಾಗಲಿ ಕೆಂಪು ಬಿಳುಪು ಮಿಶ್ರವಾಗಿ ಇದ್ದರೆ ಯಾಜಕನು ಅದನ್ನು ನೋಡಬೇಕು.
Kannada BSI Bible 2016
ಇಲ್ಲವೆ ಅವನ ದೇಹದ ಚರ್ಮದಲ್ಲಿ ಬೆಂಕಿಯ ಬೊಬ್ಬೆಯು ಉಂಟಾಗಿ ಆ ಬೊಬ್ಬೆಯ ಹಸಿಮಾಂಸವು ಬಿಳುಪಾದ ಇಲ್ಲವೆ ಸ್ವಲ್ಪ ಕೆಂಪಗೆ, ಬಿಳಿಯ ಹೊಳಪಾದ ಮಚ್ಚೆಯಾಗಿದ್ದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನ ದೇಹದ ಚರ್ಮದಲ್ಲಿ ಬೆಂಕಿಯಿಂದುಂಟಾದ ಬೊಬ್ಬೆ ಇರಲಾಗಿ ಆ ಬೊಬ್ಬೆಯ ಸ್ಥಳವು ಹೊಳೆಯುವ ಕಲೆಯಾಗಿ ಬೆಳ್ಳಗಾಗಿಯಾಗಲಿ ಕೆಂಪು ಬಿಳುಪು ವಿುಶ್ರವಾಗಿಯಾಗಲಿ ಇದ್ದರೆ ಯಾಜಕನು ಅದನ್ನು ನೋಡಬೇಕು.
Kannada Bible (KNCL) BSI 2016
ಒಬ್ಬ ವ್ಯಕ್ತಿಯ ಚರ್ಮದಲ್ಲಿ ಬೆಂಕಿಯಿಂದುಂಟಾದ ಬೊಬ್ಬೆ ಇರಲಾಗಿ ಆ ಬೊಬ್ಬೆಯ ಸ್ಥಳವು ಹೊಳೆಯುವ ಕಲೆಯಾಗಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವನ ದೇಹದ ಚರ್ಮದಲ್ಲಿ ಬೆಂಕಿಯ ಬೊಬ್ಬೆಯು ಉಂಟಾಗಿ ಆ ಬೊಬ್ಬೆಯ ಸಹ ಮಾಂಸವು ಬಿಳುಪಾದ ಇಲ್ಲವೆ ಸ್ವಲ್ಪ ಕೆಂಪಗೆ, ಬಿಳಿಯ ಹೊಳಪಾದ ಕಲೆಯಾಗಿದ್ದರೆ,