Leviticus 13:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 24
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಕಲೆಯು ಉಳಿದ ಚರ್ಮಕ್ಕಿಂತ ಆಳವಾಗಿ ತೋರಿದರೆ ಅದು ಆ ಬೊಬ್ಬೆಯಲ್ಲಿ ಹುಟ್ಟಿದ ಕುಷ್ಠವೆಂದು ತಿಳಿದು ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
Kannada BSI Bible 2016
ಯಾಜಕನು ಆಗ ಅದನ್ನು ನೋಡ ಬೇಕು. ಇಗೋ, ಆ ಹೊಳಪಾದ ಮಚ್ಚೆಯ ಮೇಲೆ ಕೂದಲು ಬಿಳುಪಾಗಿ ತಿರುಗಿದ್ದರೆ ಮತ್ತು ಅದು ನೋಡು ವದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ, ಅದು ಬೊಬ್ಬೆ ಯಿಂದ ಒಡೆದ ಕುಷ್ಠವಾಗಿರುವದು; ಆದಕಾರಣ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು. ಅದು ಕುಷ್ಠವ್ಯಾಧಿಯೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ನೋಡುವಾಗ ಆ ಹೊಳೆಯುವ ಕಲೆಯಲ್ಲಿರುವ ರೋಮವು ಬೆಳ್ಳಗಾಗಿಹೋಗಿದ್ದರೆ ಮತ್ತು ಆ ಕಲೆಯು ವಿುಕ್ಕ ಚರ್ಮಕ್ಕಿಂತ ತಗ್ಗಾಗಿ ತೋರಿದರೆ ಅದು ಆ ಬೊಬ್ಬೆಯಲ್ಲಿ ಹುಟ್ಟಿದ ಕುಷ್ಠವೆಂದು ತಿಳಿದು ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
Kannada Bible (KNCL) BSI 2016
ಬೆಳ್ಳಗಾಗಿಯಾಗಲಿ ಕೆಂಪು ಬಿಳುಪು ಮಿಶ್ರವಾಗಿಯಾಗಲಿ ಇದ್ದರೆ ಯಾಜಕನು ಅದನ್ನು ಪರೀಕ್ಷಿಸಿ ನೋಡಬೇಕು. ಅವನು ನೋಡುವಾಗ ಆ ಹೊಳೆಯುವ ಕಲೆಯಲ್ಲಿರುವ ರೋಮವು ಬೆಳ್ಳಗಾಗಿಹೋಗಿದ್ದರೆ ಮತ್ತು ಆ ಕಲೆಯು ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರಿದರೆ ಅದು ಆ ಬೊಬ್ಬೆಯಲ್ಲಿ ಹುಟ್ಟಿದ ಕುಷ್ಠವೆಂದು ತಿಳಿದು ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನು ಅದನ್ನು ಪರೀಕ್ಷಿಸಬೇಕು. ಆ ಹೊಳಪಾದ ಕಲೆಯ ಮೇಲೆ ಕೂದಲು ಬಿಳುಪಾಗಿ ತಿರುಗಿದ್ದರೆ ಮತ್ತು ಅದು ನೋಡುವುದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ, ಅದು ಬೊಬ್ಬೆಯಿಂದ ಒಡೆದ ಚರ್ಮರೋಗವಾಗಿರುವುದು. ಆದಕಾರಣ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು. ಅದು ಚರ್ಮವ್ಯಾಧಿಯಾಗಿದೆ.