Leviticus 13:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯಾಜಕನು ಮಚ್ಚೆಯನ್ನು ನೋಡಲಾಗಿ ಹೊಳೆಯುವ ಮಚ್ಚೆಯಲ್ಲಿ ಬಿಳಿರೋಮವಿಲ್ಲದೆ ಮತ್ತು ಮಚ್ಚೆಯು ಚರ್ಮಕ್ಕಿಂತ ತಗ್ಗಾಗಿಲ್ಲದೆ ಮೊಬ್ಬಾಗಿ ಹೋಗುತ್ತಿದ್ದರೆ, ಯಾಜಕನು ಆ ವ್ಯಕ್ತಿಯನ್ನು ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯಾಜಕನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿ ಬಿಳಿ ರೋಮವಿಲ್ಲದೆ ಹೋದರೆ ಮತ್ತು ಅದು ಉಳಿದ ಚರ್ಮಕ್ಕಿಂತ ಆಳವಾಗಿ ಕಾಣದೆ, ಮೊಬ್ಬಾಗಿ ಹೋಗಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು.
Kannada BSI Bible 2016
ಆದರೆ ಯಾಜಕನು ಅದನ್ನು ನೋಡಿದಾಗ ಇಗೋ, ಆ ಹೊಳಪಾದ ಮಚ್ಚೆಯ ಮೇಲೆ ಕೂದಲು ಬೆಳ್ಳಗಾಗದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ಆಳವಾಗಿರದೆ ಸ್ವಲ್ಪ ಮೊಬ್ಬಾಗಿದ್ದರೆ ಯಾಜಕನು ಆಗ ಅವನನ್ನು ಏಳು ದಿನಗಳು ಮುಚ್ಚಿಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಯಾಜಕನು ನೋಡುವಾಗ ಆ ಹೊಳೆಯುವ ಕಲೆಯಲ್ಲಿ ಬಿಳೀ ರೋಮವಿಲ್ಲದೆ ಹೋದರೆ ಮತ್ತು ಅದು ವಿುಕ್ಕ ಚರ್ಮಕ್ಕಿಂತ ತಗ್ಗಾಗಿ ತೋರದೆ ಮೊಬ್ಬಾಗಿಹೋಗಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು.
Kannada Bible (KNCL) BSI 2016
ಆದರೆ ಯಾಜಕನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿ ಬಿಳೀ ರೋಮವಿಲ್ಲದೆ ಹೋದರೆ ಮತ್ತು ಅದು ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರದೆ ಮೊಬ್ಬಾಗಿ ಹೋಗಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯಾಜಕನು ಅದನ್ನು ಪರೀಕ್ಷಿಸಿದಾಗ, ಆ ಹೊಳಪಾದ ಮಚ್ಚೆಯ ಮೇಲೆ ಕೂದಲು ಬೆಳ್ಳಗಾಗದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ಆಳವಾಗಿರದೆ ಸ್ವಲ್ಪ ಮೋಟಾಗಿದ್ದರೆ, ಯಾಜಕನು ಆಗ ಅವನನ್ನು ಏಳು ದಿನಗಳ ಕಾಲ ಮುಚ್ಚಿಡಬೇಕು.