Leviticus 13:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕನು ಆ ಕಲೆಯನ್ನು ನೋಡಬೇಕು. ಸೋಂಕಿನ ಕಲೆಯು ಚರ್ಮಕ್ಕಿಂತ ತಗ್ಗಾಗಿದ್ದರೆ ಮತ್ತು ಅದರಲ್ಲಿರುವ ರೋಮವು ತೆಳ್ಳಗಾಗಿಯೂ ಹಳದಿಯಾಗಿಯೂ ಇದ್ದರೆ, ಯಾಜಕನು ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ತಲೆಯ ಅಥವಾ ಗಡ್ಡದ ಕೆಟ್ಟ ಚರ್ಮರೋಗವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅದು ಉಳಿದ ಚರ್ಮಕ್ಕಿಂತ ಆಳವಾಗಿ ತೋರಿದರೆ ಮತ್ತು ಅದರಲ್ಲಿ ಹಳದಿಬಣ್ಣವುಳ್ಳ ಸಣ್ಣ ಕೂದಲು ಇದ್ದರೆ ಅದು ತಲೆಯಲ್ಲಾಗಲಿ ಅಥವಾ ಗಡ್ಡದಲ್ಲಾಗಲಿ ಉಂಟಾದ ಕುಷ್ಠವನ್ನು ಸೂಚಿಸುವ ಲಕ್ಷಣವಿದ್ದರೆ ಯಾಜಕನು ಅಂಥವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
Kannada BSI Bible 2016
ಆಗ ಯಾಜಕನು ಆ ವ್ಯಾಧಿಯನ್ನು ನೋಡಬೇಕು. ಇಗೋ, ಅದು ನೋಡುವದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ ಮತ್ತು ಅದರಲ್ಲಿ ಹಳದಿಯ ತೆಳ್ಳನೆಯ ಕೂದಲಿದ್ದರೆ ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು; ಅದು ಒಣಗಿದ ಇಸಬಾಗಿರುವದು. ಅದು ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ಇರುವ ಕುಷ್ಠವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅದು ವಿುಕ್ಕ ಚರ್ಮಕ್ಕಿಂತ ತಗ್ಗಾಗಿ ತೋರಿದರೆ ಮತ್ತು ಅದರಲ್ಲಿ ಹಳದಿ ಬಣ್ಣವುಳ್ಳ ಸಣ್ಣ ಕೂದಲು ಇದ್ದರೆ ಅದು ತಲೆಯಲ್ಲಾಗಲಿ ಗಡ್ಡದಲ್ಲಾಗಲಿ ಉಂಟಾದ ಕುಷ್ಠವನ್ನು ಸೂಚಿಸುವ ದದ್ದು ಆಗಿರುವದರಿಂದ ಯಾಜಕನು ಅಂಥವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
Kannada Bible (KNCL) BSI 2016
ಆಗ ಅದು ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರಿದರೆ ಮತ್ತು ಅದರಲ್ಲಿ ಹಳದಿಬಣ್ಣವುಳ್ಳ ಸಣ್ಣ ಕೂದಲು ಇದ್ದರೆ ಅದು ತಲೆಯಲ್ಲಾಗಲಿ ಗಡ್ಡದಲ್ಲಾಗಲಿ ಉಂಟಾದ ಕುಷ್ಠವನ್ನು ಸೂಚಿಸುವಂಥಾದ್ದು ಆಗಿರುವುದರಿಂದ ಯಾಜಕನು ಅಂಥವನನ್ನು ಅಶುದ್ಧನೆಂದು ನಿರ್ಣಯಿಸಬೇಕು..
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಜಕನು ಆ ವ್ಯಾಧಿಯನ್ನು ಪರೀಕ್ಷಿಸಬೇಕು. ಅದು ನೋಡುವುದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ ಮತ್ತು ಅದರಲ್ಲಿ ಹಳದಿಯ ತೆಳ್ಳನೆಯ ಕೂದಲಿದ್ದರೆ, ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು. ಅದು ತಲೆಯ ಮೇಲಾಗಲಿ ಇಲ್ಲವೆ ಗಡ್ಡದ ಮೇಲಾಗಲಿ ಇರುವ ಚರ್ಮರೋಗವಾಗಿದೆ.