Leviticus 13:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಳನೆಯ ದಿನದಲ್ಲಿ ಯಾಜಕನು ಸೋಂಕು ತಗಲಿದ ಜಾಗವನ್ನು ಪರೀಕ್ಷಿಸಬೇಕು. ರೋಗವು ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಕಡೆ ಹಳದಿಬಣ್ಣದ ಕೂದಲು ಬೆಳೆಯುತ್ತಿಲ್ಲವಾಗಿದ್ದರೆ ಮತ್ತು ರೋಗವು ಉಳಿದ ಚರ್ಮಕ್ಕಿಂತ ತಗ್ಗಾಗಿ ತೋರದಿದ್ದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಳನೆಯ ದಿನದಲ್ಲಿ ಯಾಜಕನು ಪರೀಕ್ಷಿಸುವಾಗ ಆ ಗಾಯ ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಭಾಗದಲ್ಲಿ ಹಳದಿ ಬಣ್ಣದ ಕೂದಲು ಇಲ್ಲದಿದ್ದರೆ ಮತ್ತು ಅದು ಉಳಿದ ಚರ್ಮಕ್ಕಿಂತ ಆಳವಾಗಿ ಕಾಣದೆಹೋದರೆ,
Kannada BSI Bible 2016
ಏಳನೇ ದಿನದಲ್ಲಿ ಯಾಜಕನು ಆ ವ್ಯಾಧಿಯನ್ನು ನೋಡಿದಾಗ ಇಗೋ, ಆ ಇಸಬು ಹರಡದೆ ಅದರಲ್ಲಿ ಹಳದಿ ಕೂದಲು ಇರದೆ ಆ ಇಸಬು ಚರ್ಮಕ್ಕಿಂತಲೂ ಆಳವಾಗಿ ಕಾಣದಿದ್ದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳನೆಯ ದಿನದಲ್ಲಿ ಯಾಜಕನು ನೋಡುವಾಗ ಆ ದದ್ದು ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಕಡೆ ಹಳದಿ ಬಣ್ಣದ ಕೂದಲು ಇಲ್ಲದಿದ್ದರೆ ಮತ್ತು ಅದು ವಿುಕ್ಕ ಚರ್ಮಕ್ಕಿಂತ ತಗ್ಗಾಗಿ ತೋರದೆಹೋದರೆ ಅವನು ಕ್ಷೌರ ಮಾಡಿಸಿಕೊಳ್ಳಬೇಕು.
Kannada Bible (KNCL) BSI 2016
ಏಳನೆಯ ದಿನದಲ್ಲಿ ಯಾಜಕನು ನೋಡುವಾಗ ಆ ಇಸುಬು ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಕಡೆ ಹಳದಿಬಣ್ಣದ ಕೂದಲು ಇಲ್ಲದಿದ್ದರೆ ಮತ್ತು ಅದು ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರದೆಹೋದರೆ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಳನೆಯ ದಿನದಲ್ಲಿ ಯಾಜಕನು ಆ ವ್ಯಾಧಿಯನ್ನು ಪರೀಕ್ಷಿಸಿದಾಗ, ಆ ಇಸಬು ಹರಡದೆ ಮತ್ತು ಅದರಲ್ಲಿ ಹಳದಿ ಕೂದಲು ಇರದೆ, ಆ ಇಸಬು ಮಿಕ್ಕ ಚರ್ಮಕ್ಕಿಂತಲೂ ಆಳವಾಗಿ ಕಾಣದಿದ್ದರೆ,