Leviticus 13:45 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಬ್ಬನಿಗೆ ಕುಷ್ಠರೋಗವಿದ್ದರೆ, ಅವನು ಬೇರೆ ಜನರಿಗೆ ಎಚ್ಚರಿಕೆ ಕೊಡಬೇಕು. ‘ನಾನು ಅಶುದ್ಧನು, ಅಶುದ್ಧನು’ ಎಂದು ಅವನು ಕೂಗಿಕೊಳ್ಳಬೇಕು. ಆ ವ್ಯಕ್ತಿಯು ತನ್ನ ಬಟ್ಟೆಗಳನ್ನು ಹರಿದುಕೊಂಡಿರಬೇಕು; ತನ್ನ ಕೂದಲನ್ನು ಕೆದರಿಕೊಂಡಿರಬೇಕು; ತನ್ನ ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯಾರಲ್ಲಿ ಕುಷ್ಠದ ಗುರುತು ಕಾಣಿಸಿತೋ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು, ತಲೆಯನ್ನು ಕೆದರಿಕೊಂಡು, ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು ‘ನಾನು ಅಶುದ್ಧನು, ಅಶುದ್ಧನು’ ಎಂದು ಕೂಗಿಕೊಳ್ಳಬೇಕು.
Kannada BSI Bible 2016
ಆ ವ್ಯಾಧಿ ಇರುವ ಕುಷ್ಠರೋಗಿಯು ತನ್ನ ಬಟ್ಟೆ ಗಳನ್ನು ಹರಿದುಕೊಂಡು ಬರೀ ತಲೆಯಲ್ಲಿ ಮೇಲ್ತುಟಿ ಯನ್ನು ಮುಚ್ಚಿಕೊಂಡು--ನಾನು ಅಶುದ್ಧನು, ಅಶು ದ್ಧನು ಎಂದು ಕೂಗಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾರಲ್ಲಿ ಕುಷ್ಠದ ಗುರುತು ಕಾಣಬಂತೋ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯನ್ನು ಕೆದರಿಕೊಂಡು ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು - ನಾನು ಅಶುದ್ಧನು ಅಶುದ್ಧನು ಎಂದು ಕೂಗಿಕೊಳ್ಳಬೇಕು.
Kannada Bible (KNCL) BSI 2016
ಯಾರಲ್ಲಿ ಕುಷ್ಠದ ಗುರುತು ಕಾಣಬಂತೋ ಆ ವ್ಯಕ್ತಿ ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯನ್ನು ಕೆದರಿಕೊಂಡು ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು - ‘ನಾನು ಅಶುದ್ದನು, ಅಶುದ್ಧನು’ ಎಂದು ಕೂಗಿಕೊಳ್ಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಚರ್ಮರೋಗ ಇರುವ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡವನಾಗಿ, ತಲೆಗೂದಲನ್ನು ಕೆದರಿಕೊಂಡು, ಮುಖದ ಕೆಳಭಾಗವನ್ನು ಮುಚ್ಚಿಕೊಂಡು, ‘ನಾನು ಅಶುದ್ಧನು, ಅಶುದ್ಧನು,’ ಎಂದು ಕೂಗಬೇಕು.