Leviticus 13:51 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಳನೆಯ ದಿನದಲ್ಲಿ ಯಾಜಕನು ಬೂಷ್ಟನ್ನು ಪರೀಕ್ಷಿಸಬೇಕು. ಅದು ಚರ್ಮದ ಮೇಲಾಗಲಿ ಬಟ್ಟೆಯ ಮೇಲಾಗಲಿ ನೇಯ್ದ ಅಥವಾ ಹೆಣೆದ ಬಟ್ಟೆಯ ಮೇಲಾಗಲಿ ಇದ್ದರೆ ಅದನ್ನು ಪರೀಕ್ಷಿಸಬೇಕು. ಬೂಷ್ಟು ಹರಡಿದ್ದರೆ, ಆ ಬಟ್ಟೆ ಅಥವಾ ತೊಗಲು ಅಶುದ್ಧವಾಗಿದೆ. ಯಾಜಕನು ಅದನ್ನು ಸುಟ್ಟುಹಾಕಬೇಕು. (Verses 51-52)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಳನೆಯ ದಿನದಲ್ಲಿ ಅವನು ಅದನ್ನು ಪರೀಕ್ಷಿಸುವಾಗ ಆ ಬಟ್ಟೆಯ ಹಾಸಿನಲ್ಲಾಗಲಿ ಅಥವಾ ಹೆಣಿಗೆಯಲ್ಲಾಗಲಿ ಇಲ್ಲವೆ ಯಾವುದಾದರೂ ಒಂದು ಕೆಲಸಕ್ಕೆ ಉಪಯೋಗವಾಗಿರುವ ಆ ತೊಗಲಿನಲ್ಲಿ ಆ ಮಚ್ಚೆ ಹರಡಿಕೊಂಡಿದ್ದರೆ ಅದು ಪ್ರಾಣಕ್ಕೆ ಅಪಾಯಕರವಾದ ಕುಷ್ಠವೇ, ಆ ವಸ್ತುವು ಅಶುದ್ಧ.
Kannada BSI Bible 2016
ಅವನು ಏಳನೆಯ ದಿನದಲ್ಲಿ ವ್ಯಾಧಿಯನ್ನು ನೋಡಬೇಕು. ಆ ವ್ಯಾಧಿಯು ಅವನ ಉಡುಪಿನಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನ ಲ್ಲಾಗಲಿ ಚರ್ಮದಲ್ಲಾಗಲಿ ಚರ್ಮದಿಂದ ಮಾಡಿದ ಯಾವ ಕೆಲಸದಲ್ಲಾಗಲಿ ಹರಡಿದ್ದರೆ ಅದು ಕೆಟ್ಟಕುಷ್ಠವೇ, ಅದು ಅಶುದ್ಧವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳನೆಯ ದಿನದಲ್ಲಿ ಅವನು ಅದನ್ನು ನೋಡುವಾಗ ಆ ಬಟ್ಟೆಯ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ಇಲ್ಲವೆ ಯಾವದಾದರೂ ಒಂದು ಕೆಲಸಕ್ಕೆ ಉಪಯೋಗವಾಗಿರುವ ಆ ತೊಗಲಿನಲ್ಲಿ ಆ ಮಚ್ಚೆ ಹರಡಿಕೊಂಡಿದ್ದರೆ ಅದು ಪ್ರಾಣಕ್ಕೆ ಅಪಾಯಕರವಾದ ಕುಷ್ಠವೇ; ಆ ವಸ್ತು ಅಶುದ್ಧ.
Kannada Bible (KNCL) BSI 2016
ಏಳನೆಯ ದಿನದಲ್ಲಿ ಅವನು ಅದನ್ನು ನೋಡುವಾಗ ಆ ಬಟ್ಟೆಯ ನೆಯಿಗೆಯಲ್ಲಾಗಲಿ ಹೆಣಿಗೆಯಲ್ಲಾಗಲಿ ಇಲ್ಲವೇ ಯಾವುದಾದರೂ ಒಂದು ಕೆಲಸಕ್ಕೆ ಉಪಯೋಗವಾಗಿರುವ ಆ ತೊಗಲಿನಲ್ಲಿ ಆ ಮಚ್ಚೆ ಹರಡಿಕೊಂಡಿದ್ದರೆ ಅದು ಪ್ರಾಣಕ್ಕೆ ಅಪಾಯಕರವಾದ ಕುಷ್ಠವೇ; ಆ ವಸ್ತು ಅಶುದ್ಧ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಏಳನೆಯ ದಿನದಲ್ಲಿ ಅದನ್ನು ಪರೀಕ್ಷಿಸಬೇಕು. ಆ ಬೂಜು ಅವನ ಉಣ್ಣೆ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ನೇಯ್ಗೆಯಲ್ಲಾಗಲಿ, ಹೆಣಿಗೆಯಲ್ಲಾಗಲಿ, ತೊಗಲಿನ ವಸ್ತುವಿನ್ನಾಗಲಿ ಹರಡಿದ್ದರೆ ಅದು ನಾಶಕರವಾದ ಬೂಜುರೋಗವಾಗಿದೆ. ಅದು ಅಶುದ್ಧವು.