Leviticus 13:53 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಬೂಷ್ಟು ಬಟ್ಟೆಯ ಮೇಲಾಗಲಿ ಚರ್ಮದ ಮೇಲಾಗಲಿ ನೇಯ್ದ ಅಥವಾ ಹೆಣೆದ ಬಟ್ಟೆಯ ಮೇಲಾಗಲಿ ಹರಡಿಲ್ಲವೆಂದು ಯಾಜಕನು ಕಂಡರೆ, ಅದನ್ನು ತೊಳೆಯಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯಾಜಕನು ಪರೀಕ್ಷಿಸುವಾಗ ಆ ವಸ್ತುವಿನಲ್ಲಿ ಅಂದರೆ ಆ ಬಟ್ಟೆ, ಹಾಸು, ಹೆಣಿಗೆ, ತೊಗಲಿನ ಸಾಮಾನು ಇವುಗಳಲ್ಲಿ ಆ ಮಚ್ಚೆ ಹರಡಿಕೊಳ್ಳದಿದ್ದರೆ,
Kannada BSI Bible 2016
ಯಾಜಕನು ನೋಡಿದಾಗ ಇಗೋ, ಆ ವ್ಯಾಧಿಯು ಉಡುಪಿನಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ಚರ್ಮದ ವಸ್ತುಗಳಲ್ಲಾಗಲಿ ಹರಡ ದಿದ್ದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಯಾಜಕನು ನೋಡುವಾಗ ಆ ವಸ್ತುವಿನಲ್ಲಿ ಅಂದರೆ ಆ ಬಟ್ಟೆ, ಹಾಸು, ಹೊಕ್ಕು, ತೊಗಲಿನ ಸಾಮಾನು ಇವುಗಳಲ್ಲಿ ಆ ಮಚ್ಚೆ ಹರಡಿಕೊಳ್ಳದಿದ್ದರೆ
Kannada Bible (KNCL) BSI 2016
ಆದರೆ ಯಾಜಕನು ಪರೀಕ್ಷಿಸುವಾಗ ಆ ವಸ್ತುವಿನಲ್ಲಿ ಅಂದರೆ ಆ ಬಟ್ಟೆ, ನೆಯಿಗೆ, ಹೆಣಿಗೆ, ತೊಗಲಿನ ಸಾಮಾನು ಇವುಗಳಲ್ಲಿ ಆ ಮಚ್ಚೆ ಹರಡಿಕೊಳ್ಳದಿದ್ದರೆ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯಾಜಕನು ಪರೀಕ್ಷಿಸಿದಾಗ ಬೂಜು ಉಡುಪಿನಲ್ಲಾಗಲಿ, ಹಾಸಿನಲ್ಲಾಗಲಿ, ಹೊಕ್ಕಿನಲ್ಲಾಗಲಿ, ತೊಗಲಿನ ವಸ್ತುಗಳಲ್ಲಾಗಲಿ ಹರಡದಿದ್ದರೆ,