Leviticus 13:55 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸಮಯದನಂತರ ಯಾಜಕನು ಅದನ್ನು ತಿರುಗಿ ಪರೀಕ್ಷಿಸಬೇಕು. ಬೂಷ್ಟು ಇನ್ನೂ ಹಾಗೆಯೇ ಇರುವಂತೆ ಕಂಡರೆ, ಆಗ ಆ ವಸ್ತು ಅಶುದ್ಧವಾಗಿದೆ. ಅದು ಹರಡಲಿಲ್ಲವಾದರೂ ನೀವು ಬಟ್ಟೆಯನ್ನು ಅಥವಾ ತೊಗಲನ್ನು ಸುಟ್ಟುಹಾಕಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮಚ್ಚೆ ಇದ್ದ ವಸ್ತುಗಳನ್ನು ತೊಳೆಸಿದ ಮೇಲೆ ಯಾಜಕನು ಪರೀಕ್ಷಿಸುವಾಗ ಆ ಮಚ್ಚೆಯು ಹರಡಿಕೊಳ್ಳದೆ ಇದ್ದಾಗ್ಯೂ ಅದರ ಬಣ್ಣ ಮೊದಲಿದ್ದಂತೆಯೇ ಇದ್ದರೆ ಆ ವಸ್ತು ಅಶುದ್ಧ. ಕುಷ್ಠರೋಗದ ಗುರುತು ಅದರ ಮೇಲ್ಭಾಗದಿಂದಾಗಲಿ ಅಥವಾ ಕೆಳಭಾಗದಿಂದಾಗಲಿ ಆ ವಸ್ತುವಿನೊಳಗೆ ವ್ಯಾಪಿಸಿದ್ದರಿಂದ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
Kannada BSI Bible 2016
ಅದನ್ನು ತೊಳೆದಾದ ಮೇಲೆ ಯಾಜಕನು ಆ ವ್ಯಾಧಿಯನ್ನು ನೋಡಬೇಕು: ಇಗೋ, ವ್ಯಾಧಿಯು ತನ್ನ ಬಣ್ಣವನ್ನು ಬದಲಾಯಿಸದೆ ಹರಡದಿದ್ದರೆ ಅದು ಅಶುದ್ಧವಾಗಿರುವದು: ಅದು ಒಳಗಿನಿಂದಾಗಲಿ ಹೊರಗಿನಿಂದಾಗಲಿ ಒಳಗೆ ಕೊರೆ ಯುವದು. ನೀನು ಅದನ್ನು ಬೆಂಕಿಯಿಂದ ಸುಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮಚ್ಚೆ ಇದ್ದ ವಸ್ತುವನ್ನು ತೊಳೆಸಿದ ಮೇಲೆ ಯಾಜಕನು ನೋಡುವಾಗ ಆ ಮಚ್ಚೆಯು ಹರಡಿಕೊಳ್ಳದೆ ಇದ್ದಾಗ್ಯೂ ಅದರ ಬಣ್ಣ ಮೊದಲಿದ್ದಂತೆಯೇ ಇದ್ದರೆ ಆ ವಸ್ತು ಅಶುದ್ಧ. ಕುಷ್ಠರೋಗದ ಗುರುತು ಅದರ ಮೇಲಣ ಕಡೆಯಿಂದಾಗಲಿ ಕೆಳಗಣ ಕಡೆಯಿಂದಾಗಲಿ ಆ ವಸ್ತುವಿನೊಳಗೆ ವ್ಯಾಪಿಸಿದದರಿಂದ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
Kannada Bible (KNCL) BSI 2016
ಆ ಮಚ್ಚೆ ಇದ್ದ ವಸ್ತುವನ್ನು ತೊಳೆಸಿದ ಮೇಲೆ ಯಾಜಕನು ನೋಡುವಾಗ ಆ ಮಚ್ಚೆಯು ಹರಡಿಕೊಳ್ಳದೆ ಇದ್ದಾಗ್ಯೂ ಅದರ ಬಣ್ಣ ಮೊದಲಿದ್ದಂತೆಯೇ ಇದ್ದರೆ ಆ ವಸ್ತು ಅಶುದ್ಧ. ಕುಷ್ಠರೋಗದ ಗುರುತು ಅದರ ಮೇಲಿನ ಕಡೆಯಿಂದಾಗಲಿ ಕೆಳಗಿನ ಕಡೆಯಿಂದಾಗಲಿ ಆ ವಸ್ತುವಿನೊಳಗೆ ವ್ಯಾಪಿಸಿದ್ದರಿಂದ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದನ್ನು ತೊಳೆದಾದ ಮೇಲೆ ಯಾಜಕನು ಆ ಬೂಜನ್ನು ಪರೀಕ್ಷಿಸಬೇಕು. ಆ ಬೂಜು ಬಣ್ಣವನ್ನು ಬದಲಾಯಿಸದಿದ್ದರೆ ಮತ್ತು ಹರಡದಿದ್ದರೆ ಅದು ಅಶುದ್ಧವಾಗಿರುವುದು. ಅದನ್ನು ನೀನು ಬೆಂಕಿಯಿಂದ ಸುಡಬೇಕು. ಅದು ಒಳಗಿನಿಂದಾಗಲಿ ಇಲ್ಲವೆ ಹೊರಗಿನಿಂದಾಗಲಿ ವ್ಯಾಪಿಸಿದೆ.