Leviticus 13:56 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದರೆ ಯಾಜಕನು ತೊಗಲನ್ನಾಗಲಿ ಬಟ್ಟೆಯನ್ನಾಗಲಿ ನೋಡಿದಾಗ, ತೊಳೆದನಂತರ ಬೂಷ್ಟು ಮೊಬ್ಬಾಗಿರುವುದನ್ನು ಕಂಡರೆ, ಆಗ ಯಾಜಕನು ಕಲೆ ಇರುವ ಆ ಬಟ್ಟೆಯ ಅಥವಾ ತೊಗಲಿನ ಭಾಗವನ್ನು ಕತ್ತರಿಸಿಹಾಕಬೇಕು. (ಅದು ನೇಯ್ದ ಬಟ್ಟೆಯಾಗಿದ್ದರೂ ಸರಿ, ಹೆಣೆದ ಬಟ್ಟೆಯಾಗಿದ್ದರೂ ಸರಿ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ತೊಳೆದ ಬಟ್ಟೆಯನ್ನು ಯಾಜಕನು ಪರೀಕ್ಷಿಸುವಾಗ ಅದರಲ್ಲಿದ್ದ ಮಚ್ಚೆ ಮೊಬ್ಬಾಗಿಹೋಗಿದ್ದರೆ ಅವನು ಆ ಮಚ್ಚೆ ಇರುವ ಭಾಗವನ್ನು ಆ ಬಟ್ಟೆಯಿಂದಾಗಲಿ, ತೊಗಲಿನಿಂದಾಗಲಿ, ಹಾಸಿನಿಂದಾಗಲಿ, ಹೆಣಿಗೆಯಿಂದಾಗಲಿ ಕತ್ತರಿಸಬೇಕು.
Kannada BSI Bible 2016
ಯಾಜಕನು ಅದನ್ನು ನೋಡಿದರೆ ಇಗೋ, ವ್ಯಾಧಿಯು ತೊಳೆಯಲ್ಪಟ್ಟ ನಂತರ ಸ್ವಲ್ಪ ಮೊಬ್ಬಾ ಗಿದ್ದರೆ ಅವನು ಅದನ್ನು ಬಟ್ಟೆಯಿಂದಾಗಲಿ ಚರ್ಮ ದಿಂದಾಗಲಿ ಹಾಸಿನಿಂದಾಗಲಿ ಹೊಕ್ಕಿನಿಂದಾಗಲಿ ಹರಿ ದುಹಾಕಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ತೊಳೆದ ಬಟ್ಟೆಯನ್ನು ಯಾಜಕನು ನೋಡುವಾಗ ಅದರಲ್ಲಿದ್ದ ಮಚ್ಚೆ ಮೊಬ್ಬಾಗಿಹೋಗಿದ್ದರೆ ಅವನು ಆ ಮಚ್ಚೆ ಇರುವ ಭಾಗವನ್ನು ಆ ಬಟ್ಟೆಯಿಂದಾಗಲಿ ತೊಗಲಿನಿಂದಾಗಲಿ ಹಾಸಿನಿಂದಾಗಲಿ ಹೊಕ್ಕಿನಿಂದಾಗಲಿ ಕತ್ತರಿಸಿಬಿಡಬೇಕು.
Kannada Bible (KNCL) BSI 2016
ಆದರೆ ತೊಳೆದ ಬಟ್ಟೆಯನ್ನು ಯಾಜಕನು ನೋಡುವಾಗ ಅದರಲ್ಲಿದ್ದ ಮಚ್ಚೆ ಮೊಬ್ಬಾಗಿ ಹೋಗಿದ್ದರೆ ಅವನು ಆ ಮಚ್ಚೆ ಇರುವ ಭಾಗವನ್ನು ಬಟ್ಟೆಯಿಂದಾಗಲಿ ತೊಗಲಿನಿಂದಾಗಲಿ ನೆಯಿಗೆಯಿಂದಾಗಲಿ ಹೆಣಿಗೆಯಿಂದಾಗಲಿ ಕತ್ತರಿಸಿಬಿಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನು ಅದನ್ನು ಪರೀಕ್ಷಿಸಿದರೆ, ಆ ಬೂಜು ಹಿಡಿದ ವಸ್ತುವನ್ನು ತೊಳೆದ ನಂತರ ಮಬ್ಬಾಗಿದ್ದರೆ ಅವನು ಅದನ್ನು ಬಟ್ಟೆಯಿಂದಾಗಲಿ, ಚರ್ಮದಿಂದಾಗಲಿ, ಹಾಸಿನಿಂದಾಗಲಿ, ಹೊಕ್ಕಿನಿಂದಾಗಲಿ ಹರಿದುಹಾಕಬೇಕು.