Leviticus 13:58 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ, ತೊಳೆದ ನಂತರ ಬೂಷ್ಟು ತಿರುಗಿ ಬಾರದಿದ್ದರೆ, ಆ ತೊಗಲು ಅಥವಾ ಬಟ್ಟೆ ಶುದ್ಧವಾಗಿದೆ. ಅದು ಹೆಣೆದ ಅಥವಾ ಹೊಲಿದ ಬಟ್ಟೆಯಾಗಿದ್ದರೂ ಶುದ್ಧವಾಗಿದೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಬಟ್ಟೆಯನ್ನಾಗಲಿ, ಹಾಸನ್ನಾಗಲಿ, ಹೆಣಿಗೆಯನ್ನಾಗಲಿ ಅಥವಾ ತೊಗಲಿನ ಸಾಮಾನನ್ನಾಗಲಿ ತೊಳೆದನಂತರ ಆ ಮಚ್ಚೆ ಕಾಣದೆಹೋದರೆ ಅದನ್ನು ಎರಡನೆಯ ಸಾರಿ ತೊಳೆಯಬೇಕು; ಆಗ ಅದು ಶುದ್ಧವಾಗುವುದು.
Kannada BSI Bible 2016
ನೀನು ತೊಳೆದ ಮೇಲೆ ಆ ವ್ಯಾಧಿಯು ಯಾವದರಿಂದ ಹೊರಟು ಹೋಯಿತೋ ಆ ಬಟ್ಟೆಯನ್ನೂ ಹಾಸನ್ನೂ ಹೊಕ್ಕನ್ನೂ ಇಲ್ಲವೆ ಚರ್ಮದ ಯಾವದೇ ವಸ್ತುವನ್ನೂ ಎರಡನೆಯ ಸಾರಿ ತೊಳೆಯಬೇಕು, ಆಗ ಅದು ಶುದ್ಧವಾಗಿರುವದು.ಉಣ್ಣೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ಹಾಸಿನ ಹೊಕ್ಕಿನ ಮತ್ತು ಚರ್ಮದಿಂದಾದ ಯಾವದ ರಿಂದಾಗಲಿ ಕುಷ್ಠವ್ಯಾಧಿಯವಿಷಯದಲ್ಲಿ ಅದನ್ನು ಶುದ್ಧವೆಂದು ಅಶುದ್ಧವೆಂದು ನುಡಿಯುವದಕ್ಕೆ ನ್ಯಾಯ ವಿಧಿಯು ಇದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಬಟ್ಟೆಯನ್ನಾಗಲಿ ಹಾಸನ್ನಾಗಲಿ ಹೊಕ್ಕನ್ನಾಗಲಿ ತೊಗಲಿನ ಸಾಮಾನನ್ನಾಗಲಿ ತೊಳೆದನಂತರ ಆ ಮಚ್ಚೆ ಕಾಣದೆಹೋದರೆ ಅದನ್ನು ಎರಡನೆಯ ಸಾರಿ ತೊಳೆಯಬೇಕು; ಆಗ ಅದು ಶುದ್ಧವಾಗುವದು.
Kannada Bible (KNCL) BSI 2016
ಆ ಬಟ್ಟೆಯಲ್ಲಾಗಲಿ ನೆಯಿಗೆಯಲ್ಲಾಗಲಿ ಹೆಣಿಗೆಯಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ತೊಳೆದ ನಂತರ ಆ ಮಚ್ಚೆ ಕಾಣದೆ ಹೋದರೆ ಅದನ್ನು ಎರಡನೆಯ ಸಾರಿ ತೊಳೆಯಬೇಕು; ಆಗ ಅದು ಶುದ್ಧವಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ತೊಳೆದ ಮೇಲೆ ಆ ಬೂಜು ಯಾವ ವಸ್ತುವಿನಿಂದ ಹೊರಟು ಹೋಯಿತೋ, ಆ ಬಟ್ಟೆಯನ್ನೂ, ಹಾಸನ್ನೂ, ಹೊಕ್ಕನ್ನೂ ಇಲ್ಲವೆ ಚರ್ಮದ ಯಾವುದೇ ಸಾಮಗ್ರಿಗಳನ್ನೂ ಎರಡನೆಯ ಸಾರಿ ತೊಳೆಯಬೇಕು. ಆಗ ಅದು ಶುದ್ಧವಾಗಿರುವುದು.”