Leviticus 13:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಳು ದಿನಗಳ ನಂತರ ಯಾಜಕನು ಮತ್ತೆ ಅವನನ್ನು ನೋಡಬೇಕು. ಮಚ್ಚೆಯು ಮೊಬ್ಬಾಗಿ ಚರ್ಮದಲ್ಲಿ ಹರಡದೆ ಇದ್ದರೆ, ಆಗ ಯಾಜಕನು ಅವನನ್ನು ಶುದ್ಧನೆಂದು ಪ್ರಕಟಿಸಬೇಕು. ಯಾಕೆಂದರೆ ಮಚ್ಚೆಯು ಕೇವಲ ಗುಳ್ಳೆಯಾಗಿದೆ. ಆ ವ್ಯಕ್ತಿ ತನ್ನ ಬಟ್ಟೆಗಳನ್ನು ಒಗೆದುಕೊಂಡು ತಿರುಗಿ ಶುದ್ಧನಾಗುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಏಳು ದಿನಗಳಾದ ಮೇಲೆ ಯಾಜಕನು ಪುನಃ ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊಬ್ಬಾಗಿದ್ದರೆ ಯಾಜಕನು ಅದು ಬರೀ ಗುಳ್ಳೆಯೆಂದು ತಿಳಿದು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.
Kannada BSI Bible 2016
ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಇಗೋ, ವ್ಯಾಧಿಯು ಸ್ವಲ್ಪ ಕಪ್ಪಾ ಗಿದ್ದು ಚರ್ಮದಲ್ಲೆಲ್ಲಾ ಹರಡದಿದ್ದರೆ ಯಾಜಕನು ಅವ ನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬರೀ ಕಜ್ಜಿಯಾದ ಕಾರಣ ಅವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶುದ್ಧನಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳು ದಿನಗಳಾದ ಮೇಲೆ ಯಾಜಕನು ತಿರಿಗಿ ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊಬ್ಬಾಗಿದ್ದರೆ ಯಾಜಕನು ಅದು ಬರೀ ಗುಳ್ಳೆಯೆಂದು ತಿಳಿದು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು; ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.
Kannada Bible (KNCL) BSI 2016
ಆ ಏಳು ದಿನಗಳಾದ ಮೇಲೆ ಯಾಜಕನು ಮತ್ತೆ, ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊಬ್ಬಾಗಿದ್ದರೆ ಯಾಜಕನು ಅದು ಕೇವಲ ಗುಳ್ಳೆಯೆಂದು ತಿಳಿದು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು; ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನು ಅವನನ್ನು ಏಳನೆಯ ದಿನದಲ್ಲಿ ಪರೀಕ್ಷಿಸಬೇಕು. ಆಗ ವ್ಯಾಧಿಯು ಸ್ವಲ್ಪ ಕಪ್ಪಾಗಿದ್ದು, ಚರ್ಮದಲ್ಲೆಲ್ಲಾ ಹರಡಿರದಿದ್ದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬರೀ ಕಜ್ಜಿಯಾದ ಕಾರಣ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗಿರುವನು.