Leviticus 14:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕನು ಟಗರುಗಳಲ್ಲಿ ಒಂದನ್ನು ದೋಷಪರಿಹಾರಕ ಯಜ್ಞವಾಗಿ ಅರ್ಪಿಸುವನು. ಅವನು ಆ ಟಗರನ್ನೂ ಎಣ್ಣೆಯನ್ನೂ ಯೆಹೋವನ ಸನ್ನಿಧಿಯಲ್ಲಿ ನೈವೇದ್ಯ ಸಮರ್ಪಣೆಯಾಗಿ ನಿವಾಳಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ಆ ಟಗರುಗಳಲ್ಲಿ ಒಂದನ್ನು ಮತ್ತು ಆ ಒಂದು ಸೇರು ಎಣ್ಣೆಯನ್ನು ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು. ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು.
Kannada BSI Bible 2016
ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಂಡು ಅಪರಾಧ ಬಲಿಗಾಗಿ ಸಮರ್ಪಿಸಿ ಅವುಗಳನ್ನು ಆಡಿಸುವ ಸಮರ್ಪಣೆಗಾಗಿ ಕರ್ತನ ಎದುರಿನಲ್ಲಿ ಆಡಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಟಗರುಗಳಲ್ಲಿ ಒಂದನ್ನೂ ಆ ಸೇರು ಎಣ್ಣೆಯನ್ನೂ ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು; ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು.
Kannada Bible (KNCL) BSI 2016
ಸರ್ವೇಶ್ವರನ ಸನ್ನಿಧಿಯಲ್ಲಿ ನಿಲ್ಲಿಸಿ ಆ ಟಗರುಗಳಲ್ಲಿ ಒಂದನ್ನೂ ಆ ಒಂದು ಸೇರು ಎಣ್ಣೆಯನ್ನೂ ಪ್ರಾಯಶ್ಚಿತ್ತ ಬಲಿಯಾಗಿ ಸಮರ್ಪಿಸಬೇಕು: ಅವುಗಳನ್ನು ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿ ಎತ್ತಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ, ಒಂದನೆಯ ಮೂರು ಭಾಗದಷ್ಟು ಎಣ್ಣೆಯನ್ನೂ ತೆಗೆದುಕೊಂಡು ಪ್ರಾಯಶ್ಚಿತ್ತ ಬಲಿಯಾಗಿ ಅರ್ಪಿಸಿ, ಅವುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.