Leviticus 14:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯಾಜಕನು ಪಾಪಪರಿಹಾರಕ ಮತ್ತು ಸರ್ವಾಂಗಹೋಮ ಯಜ್ಞಪಶುಗಳನ್ನು ವಧಿಸುವ ಪವಿತ್ರಸ್ಥಳದಲ್ಲಿ ಟಗರನ್ನು ವಧಿಸುವನು. ದೋಷಪರಿಹಾರಕ ಯಜ್ಞವು ಪಾಪಪರಿಹಾರಕ ಯಜ್ಞದಂತಿದೆ. ಅದು ಯಾಜಕನಿಗೆ ಸೇರುತ್ತದೆ. ಅದು ಬಹಳ ಪವಿತ್ರವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೋಷಪರಿಹಾರಕ ಯಜ್ಞಪಶುವನ್ನು ಮತ್ತು ಸರ್ವಾಂಗಹೋಮ ಪಶುವನ್ನು ವಧಿಸುವ ಸ್ಥಳದಲ್ಲೇ ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರು ವಧಿಸಲ್ಪಡಬೇಕು. ಏಕೆಂದರೆ ದೋಷಪರಿಹಾರಕ ಯಜ್ಞದ್ರವ್ಯದಂತೆಯೇ ಪ್ರಾಯಶ್ಚಿತ್ತ ಯಜ್ಞದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು, ಅದು ಮಹಾಪರಿಶುದ್ಧವಾಗಿವೆ.
Kannada BSI Bible 2016
ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪಬಲಿಯನ್ನೂ ದಹನಬಲಿಯನ್ನೂ ವಧಿಸುವ ಸ್ಥಳದಲ್ಲಿ ವಧಿಸಬೇಕು; ಯಾಕಂದರೆ ಪಾಪಬಲಿಯಂತೆಯೇ ಅಪರಾಧ ಬಲಿಯೂ ಯಾಜಕನದಾಗಿದೆ, ಅದು ಅತಿ ಪರಿಶುದ್ಧವಾದದ್ದು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೋಷಪರಿಹಾರಕಯಜ್ಞಪಶುವನ್ನೂ ಸರ್ವಾಂಗಹೋಮಪಶುವನ್ನೂ ವಧಿಸುವ ಸ್ಥಳದಲ್ಲೇ ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರು ವಧಿಸಲ್ಪಡಬೇಕು. ಯಾಕಂದರೆ ದೋಷಪರಿಹಾರಕಯಜ್ಞದ್ರವ್ಯದಂತೆಯೇ ಪ್ರಾಯಶ್ಚಿತ್ತಯಜ್ಞದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು; ಅದು ಮಹಾಪರಿಶುದ್ಧವಾದದ್ದು.
Kannada Bible (KNCL) BSI 2016
ದೋಷಪರಿಹಾರಕ ಬಲಿಪ್ರಾಣಿಯನ್ನೂ ದಹನ ಬಲಿಪ್ರಾಣಿಯನ್ನೂ ವಧಿಸುವ ಸ್ಥಳದಲ್ಲೇ, ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರನ್ನು ವಧಿಸಬೇಕು. ಏಕೆಂದರೆ ದೋಷಪರಿಹಾರಕ ಬಲಿದ್ರವ್ಯದಂತೆಯೇ ಪ್ರಾಯಶ್ಚಿತ್ತ ಬಲಿದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು; ಅದು ಮಹಾಪರಿಶುದ್ಧವಾದದ್ದು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪ ಪರಿಹಾರದ ಬಲಿಯನ್ನು, ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು. ದೋಷಪರಿಹಾರ ಬಲಿಯಂತೆಯೇ ಪ್ರಾಯಶ್ಚಿತ್ತ ಬಲಿಯೂ ಯಾಜಕನದಾಗಿದೆ. ಅದು ಮಹಾಪರಿಶುದ್ಧವಾದದ್ದು.