Leviticus 14:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ತರುವಾಯ ಯಾಜಕನು ಶುದ್ಧನಾಗಿ ಮಾಡಲ್ಪಡುವ ವ್ಯಕ್ತಿಗಾಗಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಬೇಕು. ಯಾಜಕನು ಪಾಪಪರಿಹಾರಕ ಯಜ್ಞಮಾಡುವುದರ ಮೂಲಕ ಆ ವ್ಯಕ್ತಿಯ ಅಶುದ್ಧತ್ವಕ್ಕಾಗಿ ಪ್ರಾಯಶ್ಚಿತ್ತ ಮಾಡುವನು. ಅದರ ನಂತರ ಸರ್ವಾಂಗಹೋಮಕ್ಕಾಗಿ ಯಾಜಕನು ಎರಡನೆಯ ಟಗರನ್ನು ವಧಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅದಲ್ಲದೆ ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವುದಕ್ಕೆ ಆ ಕುರಿಯನ್ನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆ ಮೇಲೆ ಯಾಜಕನು ಆ ಎರಡನೆಯ ಟಗರುಮರಿಯನ್ನು ಸರ್ವಾಂಗಹೋಮಕ್ಕಾಗಿ ವಧಿಸಬೇಕು.
Kannada BSI Bible 2016
ಇದಲ್ಲದೆ ಯಾಜಕನು ಪಾಪದ ಬಲಿಯನ್ನು ಸಮರ್ಪಿಸಿ ಶುದ್ಧಪಡಿಸಿಕೊಳ್ಳುವ ವನಿಗೋಸ್ಕರ ಅವನ ಅಶುದ್ಧತೆಗಾಗಿ ಪ್ರಾಯಶ್ಚಿತ್ತ ಮಾಡಬೇಕು; ತರುವಾಯ ಅವನು ದಹನಬಲಿಯನ್ನು ವಧಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವದಕ್ಕೆ [ಆ ಕುರಿಯನ್ನು] ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆಮೇಲೆ ಯಾಜಕನು [ಆ ಎರಡನೆಯ ಟಗರು ಮರಿಯನ್ನು] ಸರ್ವಾಂಗಹೋಮಕ್ಕಾಗಿ ವಧಿಸಬೇಕು. ಅವನು ಆ ಸರ್ವಾಂಗಹೋಮವನ್ನೂ ನೈವೇದ್ಯವನ್ನೂ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು.
Kannada Bible (KNCL) BSI 2016
ಅದಲ್ಲದೆ, ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವುದಕ್ಕೆ ಆ ಕುರಿಯನ್ನು ದೋಷಪರಿಹಾರಕ ಬಲಿಯಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆಮೇಲೆ ಯಾಜಕನು ಆ ಎರಡನೆಯ ಟಗರುಮರಿಯನ್ನು ದಹನಬಲಿಯಾಗಿ ವಧಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯಾಜಕನು ಪಾಪ ಪರಿಹಾರದ ಬಲಿಯನ್ನು ಸಮರ್ಪಿಸಿ, ಶುದ್ಧಮಾಡಿಸಿಕೊಳ್ಳುವವನಿಗೋಸ್ಕರ ಅವನ ಅಶುದ್ಧತೆಗಾಗಿ ಪ್ರಾಯಶ್ಚಿತ್ತ ಮಾಡಬೇಕು. ತರುವಾಯ ಅವನು ದಹನಬಲಿಯ ಪ್ರಾಣಿಯನ್ನು ವಧಿಸಬೇಕು.