Leviticus 14:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎರಡು ಬೆಳವಕ್ಕಿಗಳನ್ನು ಮತ್ತು ಎರಡು ಪಾರಿವಾಳ ಮರಿಗಳನ್ನು ತೆಗೆದುಕೊಳ್ಳಬೇಕು. ಬಡವರು ಸಹ ಅವುಗಳನ್ನು ಕೊಡಲು ಶಕ್ತರಾಗಿರುವರು. ಒಂದು ಪಕ್ಷಿಯು ಪಾಪಪರಿಹಾರಕ ಯಜ್ಞಕ್ಕಾಗಿಯೂ ಇನ್ನೊಂದು ಪಕ್ಷಿಯು ಸರ್ವಾಂಗಹೋಮಕ್ಕಾಗಿಯೂ ಇರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಲ್ಲದೆ ಅವನು ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಯಜ್ಞವಾಗಿ ಒಂದನ್ನು, ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು.
Kannada BSI Bible 2016
ಅವನಿಂದಾಗುವಷ್ಟು ಎರಡು ಬೆಳವಗಳನ್ನು ಎರಡು ಪಾರಿವಾಳದ ಮರಿಗಳನ್ನು ತಕ್ಕೊಳ್ಳಬೇಕು; ಅವುಗಳಲ್ಲಿ ಒಂದು ಪಾಪಬಲಿಗಾಗಿಯೂ ಇನ್ನೊಂದು ದಹನ ಬಲಿಗಾಗಿಯೂ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕಯಜ್ಞವಾಗಿ ಒಂದನ್ನೂ ಸರ್ವಾಂಗಹೋಮವಾಗಿ ಮತ್ತೊಂದನ್ನೂ ಸಮರ್ಪಿಸಬೇಕು.
Kannada Bible (KNCL) BSI 2016
ಅದಲ್ಲದೆ ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಬಲಿಯಾಗಿ ಒಂದನ್ನೂ ದಹನಬಲಿಯಾಗಿ ಮತ್ತೊಂದನ್ನೂ ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮತ್ತು ಅವನಿಂದಾಗುವಷ್ಟು ಎರಡು ಬೆಳವಕ್ಕಿಗಳನ್ನೂ ಇಲ್ಲವೆ ಎರಡು ಪಾರಿವಾಳದ ಮರಿಗಳನ್ನೂ ತೆಗೆದುಕೊಳ್ಳಬೇಕು. ಅವುಗಳಲ್ಲಿ ಒಂದು ಪಾಪ ಪರಿಹಾರದ ಬಲಿಗಾಗಿಯೂ, ಇನ್ನೊಂದು ದಹನಬಲಿಗಾಗಿಯೂ ಇರುವುದು.