Leviticus 14:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೋಷಪರಿಹಾರಕ್ಕಾಗಿ ತಂದ ಕುರಿಮರಿಯನ್ನು ಮತ್ತು ಎಣ್ಣೆಯನ್ನು ಯಾಜಕನು ತೆಗೆದುಕೊಂಡು, ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ಪ್ರಾಯಶ್ಚಿತ್ತಯಜ್ಞದ ಕುರಿಯನ್ನು, ಒಂದು ಸೇರು ಎಣ್ಣೆಯನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.
Kannada BSI Bible 2016
ಯಾಜಕನು ಅಪರಾಧದ ಬಲಿಯ ಆ ಕುರಿಮರಿಯನ್ನೂ ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು. ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಅವುಗಳನ್ನು ಆಡಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನು ಪ್ರಾಯಶ್ಚಿತ್ತಯಜ್ಞದ ಕುರಿಯನ್ನೂ ಆ ಸೇರು ಎಣ್ಣೆಯನ್ನೂ ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.
Kannada Bible (KNCL) BSI 2016
ಯಾಜಕನು ಪ್ರಾಯಶ್ಚಿತ್ತ ಬಲಿಯ ಕುರಿಯನ್ನೂ ಆ ಸೇರು ಎಣ್ಣೆಯನ್ನೂ ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯವಾಗಿ ಆರತಿಯೆತ್ತಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನು ಪ್ರಾಯಶ್ಚಿತ್ತದ ಸಮರ್ಪಣೆಯ ಆ ಕುರಿಮರಿಯನ್ನೂ, ಒಂದನೆಯ ಮೂರು ಭಾಗದಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು. ಯಾಜಕನು ಅವುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.