Leviticus 14:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ದೋಷಪರಿಹಾರಕ ಯಜ್ಞವಾದ ಕುರಿಮರಿಯನ್ನು ಯಾಜಕನು ವಧಿಸುವನು. ಯಾಜಕನು ದೋಷಪರಿಹಾರಕ ಯಜ್ಞದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧೀಕರಿಸಲ್ಪಡುವ ವ್ಯಕ್ತಿಯ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಾಯಶ್ಚಿತ್ತಯಜ್ಞದ ಕುರಿಯನ್ನು ವಧಿಸಿದನಂತರ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.
Kannada BSI Bible 2016
ಅವನು ಅಪರಾಧದ ಬಲಿಗಾಗಿ ಕುರಿಮರಿಯನ್ನು ವಧಿಸಬೇಕು. ಅಪರಾಧದ ಬಲಿಯ ಸ್ವಲ್ಪ ರಕ್ತವನ್ನು ಯಾಜಕನು ತೆಗೆದುಕೊಂಡು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಮೇಲೆಯೂ ಅವನ ಬಲಗೈಯ ಹೆಬ್ಬೆರಳಿಗೆ ಹಚ್ಚಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಾಯಶ್ಚಿತ್ತಯಜ್ಞದ ಕುರಿಯನ್ನು ವಧಿಸಿದ ನಂತರ ಯಾಜಕನು ಅದರ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.
Kannada Bible (KNCL) BSI 2016
ಪ್ರಾಯಶ್ಚಿತ್ತ ಬಲಿಯ ಕುರಿಯನ್ನು ವಧಿಸಿದ ನಂತರ ಯಾಜಕನು ಅದರ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಪ್ರಾಯಶ್ಚಿತ್ತ ಬಲಿಗಾಗಿ ಆ ಕುರಿಮರಿಯನ್ನು ವಧಿಸಬೇಕು. ಆ ಪ್ರಾಯಶ್ಚಿತ್ತ ಬಲಿಯ ಸ್ವಲ್ಪ ರಕ್ತವನ್ನು ಯಾಜಕನು ತೆಗೆದುಕೊಂಡು, ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಯ ಮೇಲೆಯೂ, ಅವನ ಬಲಗೈಯ ಹೆಬ್ಬೆರಳಿನ ಮೇಲೆಯೂ ಹಚ್ಚಬೇಕು.
Recommended Reading