Leviticus 14:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ತನ್ನ ಅಂಗೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ದೋಷಪರಿಹಾರಕ ಯಜ್ಞದ ರಕ್ತವನ್ನು ಹಚ್ಚಿದ ಸ್ಥಳದಲ್ಲಿಯೇ ಹಚ್ಚುವನು; ಸ್ವಲ್ಪ ಎಣ್ಣೆಯನ್ನು ಶುದ್ಧೀಕರಿಸಲ್ಪಡುವ ವ್ಯಕ್ತಿಯ ಬಲಗಿವಿಯ ತುದಿಗೆ ಹಚ್ಚಬೇಕು; ಸ್ವಲ್ಪ ಎಣ್ಣೆಯನ್ನು ಬಲಗೈಯ ಹೆಬ್ಬೆರಳಿಗೂ ಸ್ವಲ್ಪ ಎಣ್ಣೆಯನ್ನು ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಯಾಜಕನು ತನ್ನ ಕೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ, ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.
Kannada BSI Bible 2016
ಮತ್ತು ಯಾಜಕನು ತನ್ನ ಕೈಯಲ್ಲಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರ ಳಿಗೂ ಅಪರಾಧಬಲಿಯ ರಕ್ತವನ್ನು ಹಚ್ಚಿದ ಸ್ಥಳದ ಮೇಲೆಯೂ ಹಚ್ಚಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಯಾಜಕನು ತನ್ನ ಕೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.
Kannada Bible (KNCL) BSI 2016
ಮತ್ತು ಯಾಜಕನು ತನ್ನ ಕೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧಿಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತ ಬಲಿಪ್ರಾಣಿಯ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯಾಜಕನು ತನ್ನ ಕೈಯಲ್ಲಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಯ ಮೇಲೆಯೂ, ಅವನ ಬಲಗೈಯ ಹೆಬ್ಬೆರಳಿನ ಮೇಲೆಯೂ, ಅವನ ಬಲಗಾಲಿನ ಹೆಬ್ಬೆಟ್ಟಿನ ಮೇಲೆಯೂ ಪ್ರಾಯಶ್ಚಿತ್ತ ಬಲಿಯ ರಕ್ತದ ಸ್ಥಳದ ಮೇಲೆಯೂ ಹಚ್ಚಬೇಕು.