Leviticus 14:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕನು ತನ್ನ ಅಂಗೈಯಲ್ಲಿ ಉಳಿದ ಎಣ್ಣೆಯನ್ನು ಶುದ್ಧೀಕರಿಸಲ್ಪಡುವ ವ್ಯಕ್ತಿಯ ತಲೆಗೆ ಹಚ್ಚಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಯೆಹೋವನ ಸನ್ನಿಧಿಯಲ್ಲಿ ಶುದ್ಧೀಕರಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವುದಕ್ಕಾಗಿ ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನೆಲ್ಲಾ ಅವನ ತಲೆಯ ಮೇಲೆ ಹೊಯ್ಯಬೇಕು.
Kannada BSI Bible 2016
ಯಾಜಕನ ಕೈಯಲ್ಲಿ ಮಿಕ್ಕಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದು ಕರ್ತನ ಎದುರಿನಲ್ಲಿ ಅವನಿಗಾಗಿ ಪ್ರಾಯಶ್ಚಿತ್ತಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶುದ್ಧಮಾಡಿಸಿಕೊಳ್ಳುವವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವದಕ್ಕಾಗಿ ಯಾಜಕನು ತನ್ನ ಕೈಯಲ್ಲಿರುವ ವಿುಕ್ಕ ಎಣ್ಣೆಯನ್ನೆಲ್ಲಾ ಅವನ ತಲೆಯ ಮೇಲೆ ಹೊಯ್ಯಬೇಕು.
Kannada Bible (KNCL) BSI 2016
ಶುದ್ಧಮಾಡಿಸಿಕೊಳ್ಳುವವನ ಪರವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವುದಕ್ಕಾಗಿ ಯಾಜಕನು ತನ್ನ ಕೈಯಲ್ಲಿರುವ ಮಿಕ್ಕ ಎಣ್ಣೆಯನ್ನೆಲ್ಲಾ ಅವನ ತಲೆಯ ಮೇಲೆ ಹೊಯ್ಯಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನ ಕೈಯಲ್ಲಿರುವ ಉಳಿದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದು, ಯೆಹೋವ ದೇವರ ಎದುರಿನಲ್ಲಿ ಅವನಿಗಾಗಿ ಪ್ರಾಯಶ್ಚಿತ್ತ ಮಾಡಬೇಕು.