Leviticus 14:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಈ ಪಕ್ಷಿಗಳಲ್ಲಿ ಒಂದನ್ನು ಪಾಪಪರಿಹಾರಕ ಯಜ್ಞವಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಅರ್ಪಿಸಬೇಕು. ಅವನು ಪಕ್ಷಿಗಳನ್ನು ಧಾನ್ಯಸಮರ್ಪಣೆಯೊಂದಿಗೆ ಅರ್ಪಿಸಬೇಕು. ಹೀಗೆ ಯಾಜಕನು ಆ ವ್ಯಕ್ತಿಯ ಶುದ್ಧೀಕರಣಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು; ಆಗ ಆ ವ್ಯಕ್ತಿ ಶುದ್ಧನಾಗುವನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಾರಿವಾಳದ ಮರಿಗಳನ್ನಾಗಲಿ ದೋಷಪರಿಹಾರಕ ಯಜ್ಞವಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಧಾನ್ಯನೈವೇದ್ಯದೊಂದಿಗೆ ಸಮರ್ಪಿಸಬೇಕು. ಹೀಗೆ ಯಾಜಕನು ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವನು.
Kannada BSI Bible 2016
ಅದರಂತೆಯೇ ಅವನು ತನ್ನಿಂದಾಗುವಷ್ಟು ಮೇರೆಗೆ ಒಂದನ್ನು ಪಾಪಬಲಿಗಾಗಿ ಇನ್ನೊಂದನ್ನು ದಹನಬಲಿಗಾಗಿ ಆಹಾರ ಸಮರ್ಪಣೆ ಯೊಂದಿಗೆ ಸಮರ್ಪಿಸಬೇಕು; ಶುದ್ಧಪಡಿಸಿಕೊಳ್ಳುವವ ನಿಗೋಸ್ಕರ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯ ಶ್ಚಿತ್ತವನ್ನುಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೋಷಪರಿಹಾರಕಯಜ್ಞವಾಗಿ ಒಂದನ್ನೂ ಸರ್ವಾಂಗಹೋಮವಾಗಿ ಒಂದನ್ನೂ ನೈವೇದ್ಯದ್ರವ್ಯವನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಶುದ್ಧಮಾಡಿಸಿಕೊಳ್ಳುವವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವನು.
Kannada Bible (KNCL) BSI 2016
ಪಾರಿವಾಳದ ಮರಿಗಳಲ್ಲಿಯಾಗಲಿ ದೋಷಪರಿಹಾರಕ ಬಲಿಯಾಗಿ ಒಂದನ್ನೂ ದಹನಬಲಿಯಾಗಿ ಒಂದನ್ನೂ ನೈವೇದ್ಯದ್ರವ್ಯವನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಶುದ್ಧಿಮಾಡಿಸಿಕೊಳ್ಳುವವನ ಪರವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರಂತೆಯೇ ಅವನು ತನ್ನ ಸ್ಥಿತಿಗೆ ತಕ್ಕಂತೆ ಒಂದನ್ನು ಪಾಪ ಪರಿಹಾರದ ಬಲಿಗಾಗಿ ಮತ್ತು ಇನ್ನೊಂದನ್ನು ದಹನಬಲಿಗಾಗಿ ಧಾನ್ಯಸಮರ್ಪಣೆಯೊಂದಿಗೆ ಸಮರ್ಪಿಸಬೇಕು, ಶುದ್ಧಪಡಿಸಿಕೊಳ್ಳುವವನಿಗೋಸ್ಕರ ಯಾಜಕನು ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.”