Leviticus 14:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆಗ ಯಾಜಕನು ಬೂಷ್ಟನ್ನು ನೋಡಲು ಮನೆಯ ಒಳಗೆ ಹೋಗುವುದಕ್ಕಿಂತ ಮೊದಲು ಆ ಮನೆಯಿಂದ ಪ್ರತಿಯೊಂದು ವಸ್ತುವನ್ನು ಹೊರತೆಗೆಯಲು ಜನರಿಗೆ ಆಜ್ಞಾಪಿಸಬೇಕು. ಆಗ ಯಾಜಕನು ಮನೆಯಲ್ಲಿರುವ ಪ್ರತಿಯೊಂದು ವಸ್ತುವನ್ನು ಅಶುದ್ಧವೆಂದು ಹೇಳಬೇಕಾಗಿರುವುದಿಲ್ಲ. ಜನರು ಮನೆಯಿಂದ ಪ್ರತಿಯೊಂದು ವಸ್ತುವನ್ನು ಹೊರಗೆ ತೆಗೆದ ನಂತರ ಯಾಜಕನು ಮನೆಯೊಳಗೆ ಹೋಗುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ತಾನು ಆ ರೋಗದ ಗುರುತನ್ನು ನೋಡಲು ಬರುವುದಕ್ಕೆ ಮೊದಲು ಆ ಮನೆಯನ್ನು ಬರಿದುಮಾಡಲು ಆಜ್ಞಾಪಿಸಬೇಕು. ಹಾಗೆ ಬರಿದುಮಾಡದಿದ್ದರೆ ಆ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ಅಶುದ್ಧವಾಗುತ್ತದೆ. ಬರಿದುಮಾಡಿದ ಮೇಲೆ ಯಾಜಕನು ಆ ಮನೆಯನ್ನು ನೋಡುವುದಕ್ಕೆ ಒಳಗೆ ಹೋಗಬೇಕು.
Kannada BSI Bible 2016
ಆಗ ಯಾಜಕನು ಆ ಮನೆಯಲ್ಲಿ ವ್ಯಾಧಿಯನ್ನು ನೋಡುವದಕ್ಕೆ ಹೋಗುವ ಮೊದಲು ಆ ಮನೆಯೊಳಗೆ ಇರುವವುಗಳು ಅಶುದ್ಧಮಾಡಲ್ಪಡ ದಂತೆ ಆ ಮನೆಯು ಬರಿದು ಮಾಡಲ್ಪಡಬೇಕೆಂದು ಆಜ್ಞಾಪಿಸಬೇಕು; ತರುವಾಯ ಯಾಜಕನು ಮನೆಯನ್ನು ನೋಡುವದಕ್ಕೆ ಒಳಗೆ ಹೋಗಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನು ತಾನು ಆ ರೋಗದ ಗುರುತನ್ನು ನೋಡಲು ಬರುವದಕ್ಕೆ ಮುಂಚೆ ಆ ಮನೆಯನ್ನು ಬರಿದುಮಾಡಲಾಜ್ಞಾಪಿಸಬೇಕು. ಹಾಗೆ ಬರಿದುಮಾಡದಿದ್ದರೆ ಆ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ಅಶುದ್ಧವಾದಾವು. ಬರಿದುಮಾಡಿದ ಮೇಲೆ ಯಾಜಕನು ಆ ಮನೆಯನ್ನು ನೋಡುವದಕ್ಕೆ ಒಳಗೆ ಹೋಗಬೇಕು.
Kannada Bible (KNCL) BSI 2016
ಯಾಜಕನು ತಾನು ಆ ರೋಗದ ಗುರುತನ್ನು ನೋಡಲು ಬರುವುದಕ್ಕೆ ಮುಂಚೆ ಆ ಮನೆಯನ್ನು ಬರಿದು ಮಾಡಲು ಆಜ್ಞಾಪಿಸಬೇಕು. ಹಾಗೆ ಬರಿದು ಮಾಡದಿದ್ದರೆ ಆ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ಅಶುದ್ಧವಾಗುವುವು. ಬರಿದು ಮಾಡಿದ ಮೇಲೆ ಯಾಜಕನು ಆ ಮನೆಯನ್ನು ಪರೀಕ್ಷಿಸುವುದಕ್ಕೆ ಒಳಗೆ ಹೋಗಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಜಕನು ಆ ಮನೆಯಲ್ಲಿ ಬೂಜನ್ನು ಪರೀಕ್ಷಿಸುವುದಕ್ಕೆ ಹೋಗುವ ಮೊದಲು, ಆ ಮನೆಯೊಳಗೆ ಇರುವವುಗಳು ಅಶುದ್ಧವಾಗದಂತೆ ಆ ಮನೆಯನ್ನು ಬರಿದುಮಾಡಬೇಕೆಂದು ಆಜ್ಞಾಪಿಸಬೇಕು. ತರುವಾಯ ಯಾಜಕನು ಮನೆಯನ್ನು ಪರೀಕ್ಷಿಸುವುದಕ್ಕೆ ಒಳಗೆ ಹೋಗಬೇಕು.