Leviticus 14:45 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ವ್ಯಕ್ತಿಯು ಆ ಮನೆಯನ್ನು ಕೆಡವಿಹಾಕಿಸಬೇಕು. ಅವರು ಅದರ ಎಲ್ಲಾ ಕಲ್ಲುಗಳನ್ನು, ಮಣ್ಣನ್ನು ಮತ್ತು ಮರದ ತುಂಡುಗಳನ್ನು ಪಟ್ಟಣದ ಹೊರಗಿರುವ ಪ್ರತ್ಯೇಕವಾದ ಅಶುದ್ಧ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಆ ಮನೆಯನ್ನು ಕೆಡವಿ, ಅದರ ಎಲ್ಲಾ ಕಲ್ಲುಗಳನ್ನು, ತೊಲೆಗಳನ್ನು ಮತ್ತು ಮಣ್ಣನ್ನು ಊರಿನ ಹೊರಗೆ ಅಪವಿತ್ರಸ್ಥಳದಲ್ಲಿ ಹಾಕಿಸಬೇಕು.
Kannada BSI Bible 2016
ಅವನು ಆ ಮನೆಯನ್ನು ಕೆಡವಿಹಾಕಿ ಅದರ ಕಲ್ಲು ಗಳನ್ನೂ ಮರಗಳನ್ನೂ ಆ ಮನೆಯ ಎಲ್ಲಾ ಧೂಳನ್ನೂ ತೆಗೆದು ಅವುಗಳನ್ನು ಪಟ್ಟಣದ ಹೊರಗೆ ಅಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಆ ಮನೆಯನ್ನು ಕೆಡಹಿಸಿ ಅದರ ಎಲ್ಲಾ ಕಲ್ಲುಗಳನ್ನೂ ತೊಲೆಗಳನ್ನೂ ಮಣ್ಣನ್ನೂ ಊರಿನ ಹೊರಗೆ ಅಪವಿತ್ರಸ್ಥಳದಲ್ಲಿ ಹಾಕಿಸಿಬಿಡಬೇಕು.
Kannada Bible (KNCL) BSI 2016
ಅವನು ಆ ಮನೆಯನ್ನು ಕೆಡವಿ ಅದರ ಎಲ್ಲಾ ಕಲ್ಲುಗಳನ್ನೂ ತೊಲೆಗಳನ್ನೂ ಮಣ್ಣನ್ನೂ ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಆ ಮನೆಯನ್ನು ಕೆಡವಿಹಾಕಿ, ಅದರ ಕಲ್ಲುಗಳನ್ನೂ, ಮರಗಳನ್ನೂ, ಆ ಮನೆಯ ಎಲ್ಲಾ ಧೂಳನ್ನೂ ತೆಗೆದು, ಅವುಗಳನ್ನು ಪಟ್ಟಣದ ಹೊರಗೆ ಅಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.