Leviticus 14:48 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಂದು ಮನೆಯಲ್ಲಿ ಹೊಸ ಕಲ್ಲುಗಳನ್ನು ಮತ್ತು ಮಣ್ಣನ್ನು ಹಾಕಿಸಿದ ನಂತರ ಯಾಜಕನು ಅದನ್ನು ಪರೀಕ್ಷಿಸಬೇಕು. ಬೂಷ್ಟು ಮನೆಯಲ್ಲಿ ಹರಡದಿದ್ದರೆ, ಯಾಜಕನು ಮನೆಯನ್ನು ಶುದ್ಧವೆಂದು ಪ್ರಕಟಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆದರೆ ತಾನು ಆ ಮನೆಗೆ ಹೊಸದಾಗಿ ಗಿಲಾವು ಮಾಡಿಸಿದ ಮೇಲೆ ಯಾಜಕನು ಬಂದು ಪರೀಕ್ಷಿಸುವಾಗ ಆ ರೋಗದ ಗುರುತು ಕಾಣಿಸದೆಹೋದರೆ, ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.
Kannada BSI Bible 2016
ಆದರೆ ಯಾಜಕನು ಒಳಗೆ ಬಂದು ಅದನ್ನು ನೋಡಿದಾಗ ಇಗೋ, ಗಿಲಾವು ಮಾಡಿದ ನಂತರ ಆ ಮನೆಯಲ್ಲಿ ಆ ವ್ಯಾಧಿಯು ಹರಡಿಕೊಂಡಿರದಿದ್ದರೆ ಆ ಮನೆಯು ಶುದ್ಧವೆಂದು ಯಾಜಕನು ನಿರ್ಣಯಿಸ ಬೇಕು. ಆ ವ್ಯಾಧಿಯು ಸ್ವಸ್ಥವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ತಾನು ಆ ಮನೆಗೆ ಹೊಸದಾಗಿ ಗಿಲಾವು ಮಾಡಿಸಿದ ಮೇಲೆ ಯಾಜಕನು ಬಂದು ನೋಡುವಾಗ ಆ ರೋಗದ ಗುರುತು ಕಾಣಿಸದೆಹೋದರೆ ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.
Kannada Bible (KNCL) BSI 2016
ಆದರೆ ತಾನು ಆ ಮನೆಗೆ ಹೊಸದಾಗಿ ಮಣ್ಣು ಮೆತ್ತಿಸಿದ ಮೇಲೆ ಯಾಜಕನು ಬಂದು ನೋಡುವಾಗ ಆ ರೋಗದ ಗುರುತು ಕಾಣಿಸದೆಹೋದರೆ ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ಯಾಜಕನು ಒಳಗೆ ಬಂದು ಅದನ್ನು ಪರೀಕ್ಷಿಸಿದಾಗ, ಗಿಲಾವು ಮಾಡಿದ ನಂತರ ಆ ಮನೆಯಲ್ಲಿ ಆ ಬೂಜು ಹರಡಿಕೊಂಡಿರದಿದ್ದರೆ, ಆ ಮನೆಯು ಶುದ್ಧವೆಂದು ಯಾಜಕನು ನಿರ್ಣಯಿಸಬೇಕು. ಏಕೆಂದರೆ ಆ ಬೂಜು ಹೊರಟುಹೋಯಿತು.