Leviticus 14:51 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಯಾಜಕನು ದೇವದಾರಿನ ಕಟ್ಟಿಗೆಯನ್ನು, ಹಿಸ್ಸೋಪನ್ನು, ಕೆಂಪು ಬಟ್ಟೆಯನ್ನು ಮತ್ತು ಸಜೀವವಾದ ಪಕ್ಷಿಯನ್ನು ತೆಗೆದುಕೊಳ್ಳುವನು. ಯಾಜಕನು ಹರಿಯುವ ನೀರಿನ ಮೇಲೆ ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಅವುಗಳನ್ನು ಅದ್ದುವನು. ಬಳಿಕ ಯಾಜಕನು ರಕ್ತವನ್ನು ಆ ಮನೆಯ ಮೇಲೆ ಏಳು ಸಲ ಚಿಮಿಕಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದೇವದಾರಿನ ಕಟ್ಟಿಗೆಯನ್ನು, ಹಿಸ್ಸೋಪಿನ ಬರಲನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಸಜೀವವಾದ ಮತ್ತೊಂದು ಪಕ್ಷಿಯನ್ನು ತೆಗೆದುಕೊಂಡು ತಾನು ವಧಿಸಿದ ಪಕ್ಷಿಯ ರಕ್ತದಲ್ಲಿಯೂ ಹಾಗು ಒರತೆಯ ನೀರಿನಲ್ಲಿಯೂ ಅದ್ದಿ ಏಳು ಸಾರಿ ಆ ಮನೆಯ ಗೋಡೆಗಳಿಗೆ ಪ್ರೋಕ್ಷಿಸಬೇಕು.
Kannada BSI Bible 2016
ತರುವಾಯ ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವುಳ್ಳ ದಾರ ವನ್ನೂ ಸಜೀವವುಳ್ಳ ಪಕ್ಷಿಯನ್ನೂ ತೆಗೆದುಕೊಂಡು ಅವುಗಳನ್ನು ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಮತ್ತು ಹರಿಯುವ ನೀರಿನಲ್ಲಿ ಅದ್ದಿ ಏಳುಸಾರಿ ಆ ಮನೆಗೆ ಚಿಮುಕಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದೇವದಾರಿನ ಕಟ್ಟಿಗೆಯನ್ನೂ ಹಿಸ್ಸೋಪಿನ ಬರಲನ್ನೂ ರಕ್ತವರ್ಣವುಳ್ಳ ದಾರವನ್ನೂ ಸಜೀವವಾದ ಮತ್ತೊಂದು ಪಕ್ಷಿಯನ್ನೂ ತೆಗೆದುಕೊಂಡು ತಾನು ವಧಿಸಿದ ಪಕ್ಷಿಯ ರಕ್ತದಲ್ಲಿಯೂ ಸೆಲೇ ನೀರಿನಲ್ಲಿಯೂ ಅದ್ದಿ ಏಳು ಸಾರಿ ಆ ಮನೆಯ ಗೋಡೆಗಳಿಗೆ ಪ್ರೋಕ್ಷಿಸಬೇಕು.
Kannada Bible (KNCL) BSI 2016
ಆ ದೇವದಾರಿನ ಕಟ್ಟಿಗೆಯನ್ನೂ ಹಿಸ್ಸೋಪಿನ ಬರಲನ್ನೂ ರಕ್ತವರ್ಣವುಳ್ಳ ದಾರವನ್ನೂ ಸಜೀವವಾದ ಮತ್ತೊಂದು ಪಕ್ಷಿಯನ್ನೂ ತೆಗೆದುಕೊಂಡು ತಾನು ವಧಿಸಿದ ಪಕ್ಷಿಯ ರಕ್ತದಲ್ಲಿಯೂ ಒರತೆಯ ನೀರಿನಲ್ಲಿಯೂ ಅದ್ದಿ ಏಳು ಸಾರಿ ಆ ಮನೆಯ ಗೋಡೆಗಳಿಗೆ ಪ್ರೋಕ್ಷಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ದೇವದಾರು ಕಟ್ಟಿಗೆಯನ್ನೂ, ಹಿಸ್ಸೋಪನ್ನೂ, ರಕ್ತವರ್ಣ ದಾರವನ್ನೂ, ಸಜೀವವುಳ್ಳ ಪಕ್ಷಿಯನ್ನೂ ತೆಗೆದುಕೊಂಡು, ಅವುಗಳನ್ನು ವಧಿಸಿದ ಪಕ್ಷಿಯ ರಕ್ತದಲ್ಲಿ ಮತ್ತು ಹರಿಯುವ ನೀರಿನಲ್ಲಿ ಅದ್ದಿ, ಏಳು ಸಾರಿ ಆ ಮನೆಗೆ ಚಿಮುಕಿಸಬೇಕು.