Leviticus 14:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕನು ಸಜೀವವಾದ ಎರಡನೆಯ ಪಕ್ಷಿಯನ್ನು, ದೇವದಾರುಮರದ ತುಂಡನ್ನು, ಕೆಂಪುಬಣ್ಣದ ಬಟ್ಟೆಯ ತುಂಡನ್ನು ಮತ್ತು ಹಿಸ್ಸೋಪ್ ಗಿಡವನ್ನು ತೆಗೆದುಕೊಳ್ಳಬೇಕು. ಸೆಲೇ ನೀರಿನ ಮೇಲೆ ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಜೀವಂತವಾಗಿರುವ ಪಕ್ಷಿಯನ್ನು ಮತ್ತು ಇತರ ವಸ್ತುಗಳನ್ನು ಅದ್ದಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅವನು ಮತ್ತೊಂದು ಪಕ್ಷಿಯನ್ನು, ಆ ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಹರಿಯುವ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಈ ಎಲ್ಲಾ ವಸ್ತುಗಳನ್ನು ಮತ್ತು ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಬೇಕು.
Kannada BSI Bible 2016
ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಂಡು ಹರಿಯುವ ನೀರಿನ ಬಳಿಯಲ್ಲಿ ಕೊಲ್ಲಲ್ಪಟ್ಟ ಆ ಪಕ್ಷಿಯ ರಕ್ತದಲ್ಲಿ ಅದ್ದಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೊಂದು ಪಕ್ಷಿಯನ್ನೂ ಆ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್ ಗಿಡದ ಬರಲನ್ನೂ ತೆಗೆದುಕೊಂಡು ಸೆಲೇ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಅವುಗಳನ್ನೆಲ್ಲಾ ಆ ಪಕ್ಷಿಯನ್ನೂ ಸಜೀವವಾಗಿಯೇ ಅದ್ದಿ
Kannada Bible (KNCL) BSI 2016
ಆ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್ ಗಿಡದ ಬರಲನ್ನೂ ತೆಗೆದುಕೊಂಡು ಒರತೆ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಅವುಗಳನ್ನೆಲ್ಲಾ ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ, ದೇವದಾರು ಕಟ್ಟಿಗೆಯನ್ನೂ, ರಕ್ತವರ್ಣದ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಂಡು, ಹರಿಯುವ ನೀರಿನ ಬಳಿಯಲ್ಲಿ ವಧಿಸಿದ ಆ ಪಕ್ಷಿಯ ರಕ್ತದಲ್ಲಿ ಅದ್ದಿ,