Leviticus 14:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಬಳಿಕ ಆ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸರ್ವಾಂಗಕ್ಷೌರ ಮಾಡಿಕೊಂಡು ಸ್ನಾನ ಮಾಡಬೇಕು. ಆಗ ಅವನು ಶುದ್ಧನಾಗುವನು. ಬಳಿಕ ಆ ವ್ಯಕ್ತಿ ಪಾಳೆಯದೊಳಗೆ ಹೋಗಬಹುದು. ಆದರೆ ಅವನು ತನ್ನ ಡೇರೆಯಿಂದ ಏಳು ದಿನಗಳವರೆಗೆ ಹೊರಗೆ ಇರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೆ ಇರಬೇಕು.
Kannada BSI Bible 2016
ಶುದ್ಧವಾಗುವದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಂಡು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು; ತರುವಾಯ ಅವನು ಪಾಳೆಯ ದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳ ವರೆಗೆ ಕಾಯಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸರ್ವಾಂಗಕ್ಷೌರಮಾಡಿಸಿಕೊಂಡು ಸ್ನಾನ ಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೇ ಇರಬೇಕು.
Kannada Bible (KNCL) BSI 2016
ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು. ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೇ ಇರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಶುದ್ಧವಾಗುವುದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ, ತನ್ನ ಎಲ್ಲಾ ಕೂದಲನ್ನು ಬೋಳಿಸಿಕೊಂಡು, ತಾನು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು. ತರುವಾಯ ಅವನು ಪಾಳೆಯದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳವರೆಗೆ ಕಾಯಬೇಕು.