Leviticus 14:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಳನೆಯ ದಿನದಲ್ಲಿ ಅವನು ತನ್ನ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಳ್ಳಬೇಕು. ಅವನು ತನ್ನ ತಲೆಯ, ಗಡ್ಡದ ಮತ್ತು ಹುಬ್ಬಿನ ಕೂದಲನ್ನು, ಹೌದು, ಎಲ್ಲಾ ಕೂದಲನ್ನು ಕ್ಷೌರ ಮಾಡಿಸಿಕೊಳ್ಳಬೇಕು. ಬಳಿಕ ಅವನು ತನ್ನ ಬಟ್ಟೆಗಳನ್ನು ತೊಳೆದು ನೀರಿನಲ್ಲಿ ಸ್ನಾನಮಾಡಬೇಕು. ಅಂದಿನಿಂದ ಅವನು ಶುದ್ಧನಾಗಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರಮಾಡಿಸಿಕೊಂಡು, ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಆಗ ಅವನು ಶುದ್ಧನಾಗುವನು.
Kannada BSI Bible 2016
ಆದರೆ ಏಳೆನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ ಗಡ್ಡವನ್ನೂ ಕಣ್ಣು ಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಕ್ಷೌರಮಾಡಿಸಿಕೊಳ್ಳಬೇಕು; ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರಮಾಡಿಸಿಕೊಂಡು ತನ್ನ ಬಟ್ಟೆಗಳನ್ನು ಒಗೆದುಕೊಂಡು ಜಲಸ್ನಾನಮಾಡಬೇಕು. ಆಗಿನಿಂದ ಶುದ್ಧನಾಗುವನು.
Kannada Bible (KNCL) BSI 2016
ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರ ಮಾಡಿಸಿಕೊಂಡು ತನ್ನ ಬಟ್ಟೆಗಳನ್ನು ಒಗೆದುಕೊಂಡು ಜಲಸ್ನಾನ ಮಾಡಬೇಕು. ಆಗಿನಿಂದ ಶುದ್ಧನಾಗುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಏಳನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ, ಗಡ್ಡವನ್ನೂ, ತನ್ನ ಕಣ್ಣುಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಬೋಳಿಸಿಕೊಳ್ಳಬೇಕು. ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು.