Leviticus 15:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಯಾವನಾದರೂ ಸ್ರಾವವುಳ್ಳ ವ್ಯಕ್ತಿಯ ಕೆಳಗಿರುವ ಯಾವದೇ ವಸ್ತುಗಳನ್ನು ಮುಟ್ಟಿದರೂ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಸ್ರಾವವುಳ್ಳ ವ್ಯಕ್ತಿಯ ಕೆಳಗಿರುವ ವಸ್ತುಗಳನ್ನು ತೆಗೆದುಕೊಂಡುಹೋಗುವ ಯಾವನಾದರೂ ತನ್ನ ಬಟ್ಟೆಗಳನ್ನು ತೊಳೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಅಂತಹ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
Kannada BSI Bible 2016
ಇದಲ್ಲದೆ ಅವನ ಕೆಳಗಿರುವ ಯಾವದಾದರೂ ವಸ್ತುವನ್ನು ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವುಗಳಲ್ಲಿ ಯಾವದನ್ನಾದರೂ ಹೊತ್ತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಅಂಥ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
Kannada Bible (KNCL) BSI 2016
ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಆ ಸಂಜೆಯವರೆಗೆ ಅಶುದ್ಧನಾಗಿರುವನು. ಅಂಥ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಕೆಳಗಿರುವ ಯಾವುದಾದರೂ ವಸ್ತುವನ್ನು ಮುಟ್ಟಿದವನು ಸಂಜೆಯವರೆಗೆ ಅಶುದ್ಧನಾಗಿರಬೇಕು, ಅವುಗಳಲ್ಲಿ ಯಾವುದನ್ನಾದರೂ ಹೊತ್ತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವನು ಅಶುದ್ಧನಾಗಿರುವನು.