Leviticus 15:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ, ಅವನು ಶುದ್ಧಮಾಡಿಕೊಳ್ಳುವುದಕ್ಕೆ ಏಳು ದಿನಗಳವರೆಗೆ ಕಾಯಬೇಕು. ಬಳಿಕ ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಹರಿಯುವ ನೀರಿನಲ್ಲಿ ಸ್ನಾನಮಾಡಬೇಕು. ಆಗ ಅವನು ಶುದ್ಧನಾಗುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ, ಅವನು ಶುದ್ಧಮಾಡಿಸಿಕೊಳ್ಳುವುದಕ್ಕೆ ಆ ದಿನದಿಂದ ಏಳು ದಿನಗಳನ್ನು ಲೆಕ್ಕಮಾಡಿ, ತನ್ನ ಬಟ್ಟೆಗಳನ್ನು ಒಗೆದುಕೊಂಡು, ಹರಿಯುವ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು.
Kannada BSI Bible 2016
ಸ್ರಾವವುಳ್ಳವನು ತನ್ನ ಸ್ರಾವದಿಂದ ಶುದ್ಧನಾದರೆ ತನ್ನ ಶುದ್ಧತೆಗಾಗಿ ಏಳು ದಿನಗಳನ್ನು ಲೆಕ್ಕಮಾಡಿ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಇದಲ್ಲದೆ ಹರಿಯುವ ನೀರಿನಲ್ಲಿ ತನ್ನ ಶರೀರವನ್ನು ತೊಳೆದುಕೊಳ್ಳಬೇಕು; ಆಗ ಅವನು ಶುದ್ಧನಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ ಅವನು ಶುದ್ಧಮಾಡಿಸಿಕೊಳ್ಳುವದಕ್ಕೆ ಆಗಿನಿಂದ ಏಳು ದಿನಗಳನ್ನು ಲೆಕ್ಕಿಸಿಕೊಂಡು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸೆಲೇ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು.
Kannada Bible (KNCL) BSI 2016
ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ ಅವನು ಶುದ್ಧ ಮಾಡಿಸಿಕೊಳ್ಳುವುದಕ್ಕೆ ಆಗಿನಿಂದ ಏಳು ದಿನಗಳನ್ನು ಎಣಿಸಿಕೊಂಡು ತನ್ನ ಬಟ್ಟೆಗಳನ್ನು ಒಗೆದುಕೊಂಡು ಒರತೆ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಸ್ರಾವವುಳ್ಳವನು ತನ್ನ ಸ್ರಾವದಿಂದ ತನ್ನ ಶುದ್ಧತೆಗಾಗಿ ಏಳು ದಿನಗಳನ್ನು ಲೆಕ್ಕ ಮಾಡಿ, ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಇದಲ್ಲದೆ ಹರಿಯುವ ನೀರಿನಲ್ಲಿ ಸ್ನಾನಮಾಡಬೇಕು. ಆಗ ಅವನು ಶುದ್ಧನಾಗಿರುವನು.