Leviticus 15:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಂಟನೆಯ ದಿನದಲ್ಲಿ ಆ ವ್ಯಕ್ತಿ ತನಗೋಸ್ಕರ ಎರಡು ಬೆಳವಕ್ಕಿಗಳನ್ನು ಅಥವಾ ಎರಡು ಪಾರಿವಾಳದ ಮರಿಗಳನ್ನು ತೆಗೆದುಕೊಳ್ಳಬೇಕು. ಅವನು ದೇವದರ್ಶನ ಗುಡಾರದ ಬಾಗಿಲಿನ ಬಳಿ ಯೆಹೋವನ ಸನ್ನಿಧಿಗೆ ಬರಬೇಕು. ಆ ವ್ಯಕ್ತಿ ಎರಡು ಪಕ್ಷಿಗಳನ್ನು ಯಾಜಕನಿಗೆ ಕೊಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಂಟನೆಯ ದಿನದಲ್ಲಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.
Kannada BSI Bible 2016
ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತೆಗೆದು ಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಕರ್ತನ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಂಟನೆಯ ದಿನದಲ್ಲಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಲಿಗೆ ಯೆಹೋವನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.
Kannada Bible (KNCL) BSI 2016
ಎಂಟನೆಯ ದಿನ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಸರ್ವೇಶ್ವರನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳ ಮರಿಗಳನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲ ಬಳಿ ಯೆಹೋವ ದೇವರ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು.