Leviticus 15:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಸ್ತ್ರೀಗೆ ಅವಳ ತಿಂಗಳ ಮುಟ್ಟಿನಿಂದ ಸ್ರಾವವಿದ್ದರೆ, ಅವಳು ಏಳು ದಿನಗಳವರೆಗೆ ಅಶುದ್ಧಳಾಗಿರುವಳು. ಯಾವನಾದರೂ ಆಕೆಯನ್ನು ಮುಟ್ಟಿದರೆ, ಆ ವ್ಯಕ್ತಿಯೂ ಸಾಯಂಕಾಲದವರೆಗೆ ಆಶುದ್ಧನಾಗಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಸ್ತ್ರೀಗೆ ರಕ್ತಸ್ರಾವವಾದರೆ ಅವಳು ಏಳು ದಿನಗಳ ತನಕ ಪ್ರತ್ಯೇಕವಾಗಿರಬೇಕು. ಅವಳನ್ನು ಮುಟ್ಟಿದವರು ಆ ದಿನದ ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.
Kannada BSI Bible 2016
ಒಬ್ಬ ಸ್ತ್ರೀಗೆ ತನ್ನ ಶರೀರದಲ್ಲಿ ರಕ್ತಸ್ರಾವವಿದ್ದರೆ ಅವಳು ಏಳು ದಿವಸಗಳ ವರೆಗೆ ಪ್ರತ್ಯೇಕಿಸಲ್ಪಡಬೇಕು. ಅವಳನ್ನು ಯಾವನಾದರೂ ಮುಟ್ಟಿದರೆ ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು;
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ತ್ರೀಗೆ ರಕ್ತಸ್ರಾವವಾದರೆ ಅವಳು ಏಳು ದಿನಗಳ ತನಕ ಪ್ರತ್ಯೇಕವಾಗಿರಬೇಕು. ಅವಳನ್ನು ಮುಟ್ಟಿದವರು ಆ ದಿನದ ಸಾಯಂಕಾಲದವರೆಗೆ ಅಶುದ್ಧರಾಗುವರು.
Kannada Bible (KNCL) BSI 2016
“ಮಹಿಳೆಗೆ ರಕ್ತಸ್ರಾವವಾದರೆ ಅವಳು ಏಳು ದಿನಗಳ ತನಕ ಪ್ರತ್ಯೇಕವಾಗಿರಬೇಕು. ಅವಳನ್ನು ಮುಟ್ಟಿದವರು ಆ ದಿನದ ಸಂಜೆಯವರೆಗೆ ಅಶುದ್ಧರಾಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಒಬ್ಬ ಸ್ತ್ರೀಗೆ ತನ್ನ ಶರೀರದಲ್ಲಿ ರಕ್ತ ಸ್ರಾವವಿದ್ದರೆ, ಅವಳು ಏಳು ದಿವಸಗಳವರೆಗೆ ಪ್ರತ್ಯೇಕವಾಗಿರಬೇಕು, ಅವಳನ್ನು ಯಾರಾದರೂ ಮುಟ್ಟಿದರೆ, ಅವರು ಸಂಜೆಯವರೆಗೆ ಅಶುದ್ಧರಾಗಿರುವರು.