Leviticus 15:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಪುರುಷನು ಸ್ತ್ರೀಯ ಮುಟ್ಟಿನ ಸಮಯದಲ್ಲಿ ಆಕೆಯೊಡನೆ ಲೈಂಗಿಕ ಸಂಪರ್ಕ ಹೊಂದಿದರೆ, ಆಗ ಅವನು ಏಳು ದಿನಗಳವರೆಗೆ ಅಶುದ್ಧನಾಗಿರುವನು. ಅವನು ಮಲಗಿಕೊಳ್ಳುವ ಪ್ರತಿಯೊಂದು ಹಾಸಿಗೆಯು ಅಶುದ್ಧವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪುರುಷನು ಒಂದು ವೇಳೆ ಅಂಥವಳೊಡನೆ ಸಂಗಮಿಸಿದರೆ, ಅವಳ ಋತುಸ್ರಾವ ಅವನಿಗೆ ತಗುಲಿದರೆ, ಅವನು ಏಳು ದಿನಗಳ ತನಕ ಅಶುದ್ಧನಾಗಿರುವನು. ಅಷ್ಟರಲ್ಲಿ ಅವನು ಯಾವ ಹಾಸಿಗೆಯ ಮೇಲೆ ಮಲಗಿಕೊಂಡರೂ ಅದು ಅಶುದ್ಧವಾಗಿರುವುದು.
Kannada BSI Bible 2016
ಯಾವನಾದರೂ ಅವಳೊಂದಿಗೆ ಮಲಗಿದರೆ ಅವಳ ಸಾರವು (ಹೊಲೆ) ಅವನಿಗೆ ತಗಲಿದರೆ ಅವನು ಏಳು ದಿವಸ ಅಶುದ್ಧನಾಗಿರಬೇಕು; ಅವನು ಮಲಗಿ ಕೊಳ್ಳುವ ಹಾಸಿಗೆಯೆಲ್ಲಾ ಅಶುದ್ಧವಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪುರುಷನು ಒಂದು ವೇಳೆ ಅಂಥವಳೊಡನೆ ಸಂಗವಿುಸಿದದರಿಂದ ಅವಳ ರಜಸ್ಸು ಅವನಿಗೆ ತಗಲಿದರೆ ಅವನು ಏಳು ದಿನಗಳ ತನಕ ಅಶುದ್ಧನಾಗಿರುವನು. ಅಷ್ಟರಲ್ಲಿ ಅವನು ಯಾವ ಹಾಸಿಗೆಯ ಮೇಲೆ ಮಲಗಿಕೊಂಡರೂ ಅದು ಅಶುದ್ಧವಾಗಿರುವದು.
Kannada Bible (KNCL) BSI 2016
ಪುರುಷನು ಒಂದು ವೇಳೆ ಅಂಥವಳೊಡನೆ ಸಂಗಮಿಸಿ ಅವಳ ರಜಸ್ಸು ಅವನಿಗೆ ತಗಲಿದರೆ ಅವನು ಏಳು ದಿನಗಳ ತನಕ ಅಶುದ್ಧನಾಗಿರುವನು. ಅಷ್ಟರಲ್ಲಿ ಅವನು ಯಾವ ಹಾಸಿಗೆಯ ಮೇಲೆ ಮಲಗಿಕೊಂಡರೂ ಅದು ಅಶುದ್ಧವಾಗಿರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಯಾವನಾದರೂ ಅವಳೊಂದಿಗೆ ಸಂಗಮಿಸಿದರೆ ಮತ್ತು ಅವಳ ಸ್ರಾವವು ಅವನಿಗೆ ತಗಲಿದರೆ, ಅವನು ಏಳು ದಿವಸ ಅಶುದ್ಧನಾಗಿರಬೇಕು. ಅವನು ಮಲಗಿಕೊಳ್ಳುವ ಹಾಸಿಗೆಯೆಲ್ಲಾ ಅಶುದ್ಧವಾಗಿರುವುದು.