Leviticus 15:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ, ಅದು ತಿಂಗಳ ಮುಟ್ಟಿನ ಕಾಲದಲ್ಲಿ ಅವಳು ಮಲಗಿರುವ ಹಾಸಿಗೆಯಂತೆಯೇ ಅಶುದ್ಧವಾಗಿರುವುದು. ಅವಳು ಯಾವುದರ ಮೇಲೆ ಕುಳಿತರೂ ಅದು ತಿಂಗಳ ಮುಟ್ಟಿನ ಕಾಲದಲ್ಲಿ ಅವಳು ಕುಳಿತಿದ್ದ ವಸ್ತುವಿನಂತೆಯೇ ಅಶುದ್ಧವಾಗಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ ಅದು ಮುಟ್ಟಿನ ಕಾಲದಲ್ಲಿ ಮಲಗಿದ ಹಾಸಿಗೆಯಂತೆಯೇ ಅಶುದ್ಧವಾಗುವುದು. ಅವಳು ಯಾವುದರ ಮೇಲೆ ಕುಳಿತುಕೊಂಡರೂ ಅದು ಮುಟ್ಟಿನ ಕಾಲದಲ್ಲಿ ಕುಳಿತುಕೊಂಡ ವಸ್ತುವಿನಂತೆ ಅಶುದ್ಧವಾಗಿರುವುದು.
Kannada BSI Bible 2016
ಅವಳ ಸ್ರಾವದ ಎಲ್ಲಾ ದಿನಗಳಲ್ಲಿ ಅವಳು ಮಲಗಿಕೊಳ್ಳುವ ಪ್ರತಿಯೊಂದು ಹಾಸಿಗೆಯೂ ಅವಳ ಮುಟ್ಟಿನ ಹಾಸಿಗೆಯಂತಿರಬೇಕು; ಅವಳು ಕೂತುಕೊಳ್ಳುವದೆಲ್ಲವೂ ಅವಳ ಪ್ರತ್ಯೇಕದ ಮುಟ್ಟಿನ ಅಶುದ್ಧತೆಯಂತೆಯೇ ಅಶುದ್ಧವಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ ಅದು ಮುಟ್ಟಿನ ಕಾಲದಲ್ಲಿ ಮಲಗಿದ ಹಾಸಿಗೆಯಂತೆಯೇ ಅಶುದ್ಧವಾಗುವದು. ಅವಳು ಯಾವದರ ಮೇಲೆ ಕೂತುಕೊಂಡರೂ ಅದು ಮುಟ್ಟಿನ ಕಾಲದಲ್ಲಿ ಕೂತುಕೊಂಡ ವಸ್ತುವಿನಂತೆ ಅಶುದ್ಧವಾಗಿರುವದು.
Kannada Bible (KNCL) BSI 2016
ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ, ಅದು ಮುಟ್ಟಿನ ಕಾಲದಲ್ಲಿ ಮಲಗಿದ ಹಾಸಿಗೆಯಂತೆಯೇ, ಅಶುದ್ಧವಾಗುವುದು. ಅವಳು ಯಾವುದರ ಮೇಲೆ ಕುಳಿತುಕೊಂಡರೂ ಅದು ಮುಟ್ಟಿನ ಕಾಲದಲ್ಲಿ ಕುಳಿತುಕೊಂಡ ವಸ್ತುವಿನಂತೆ ಅಶುದ್ಧವಾಗಿರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳ ಸ್ರಾವದ ಎಲ್ಲಾ ದಿನಗಳಲ್ಲಿ ಅವಳು ಮಲಗಿಕೊಳ್ಳುವ ಹಾಸಿಗೆಯು, ಅವಳ ಮುಟ್ಟಿನ ಹಾಸಿಗೆಯಂತೆ ಅಶುದ್ಧವಾಗಿರುವುದು. ಅವಳು ಕುಳಿತುಕೊಳ್ಳುವುದೆಲ್ಲವೂ ಅವಳ ಮುಟ್ಟಿನ ಅಶುದ್ಧತೆಯಂತೆಯೇ ಅಶುದ್ಧವಾಗಿರುವುದು.