Leviticus 15:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತರುವಾಯ ಯಾಜಕನು ಒಂದು ಪಕ್ಷಿಯನ್ನು ಪಾಪಪರಿಹಾರಕ ಯಜ್ಞವಾಗಿಯೂ ಇನ್ನೊಂದು ಪಕ್ಷಿಯನ್ನು ಸರ್ವಾಂಗಹೋಮವಾಗಿಯೂ ಅರ್ಪಿಸಬೇಕು. ಹೀಗೆ ಯಾಜಕನು ಅವಳಿಗಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ರಾವದಿಂದುಂಟಾದ ಅಶುದ್ಧತೆಯ ವಿಷಯವಾಗಿ ಯೆಹೋವನ ಸನ್ನಿಧಿಯಲ್ಲಿ ಅವಳಿಗೋಸ್ಕರ ದೋಷಪರಿಹಾರ ಮಾಡುವನು.
Kannada BSI Bible 2016
ಯಾಜಕನು ಒಂದನ್ನು ಪಾಪಬಲಿಗಾ ಗಿಯೂ ಇನ್ನೊಂದನ್ನು ದಹನಬಲಿಗಾಗಿಯೂ ಸಮ ರ್ಪಿಸಬೇಕು; ಯಾಜಕನು ಅವಳಿಗಾಗಿ ಅವಳ ಅಶುದ್ಧ ತೆಯ ಸ್ರಾವದ ವಿಷಯದಲ್ಲಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನು ದೋಷಪರಿಹಾರಕಯಜ್ಞಕ್ಕಾಗಿ ಒಂದನ್ನೂ ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ರಾವದಿಂದುಂಟಾದ ಅಪರಿಶುದ್ಧತೆಯ ವಿಷಯವಾಗಿ ಯೆಹೋವನ ಸನ್ನಿಧಿಯಲ್ಲಿ ಅವಳಿಗೋಸ್ಕರ ದೋಷಪರಿಹಾರ ಮಾಡುವನು.
Kannada Bible (KNCL) BSI 2016
ಯಾಜಕನು ದೋಷಪರಿಹಾರಕ ಬಲಿಗಾಗಿ ಒಂದನ್ನೂ ದಹನಬಲಿಗಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ರಾವದಿಂದುಂಟಾದ ಅಪರಿಶುದ್ಧತೆಯ ವಿಷಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಅವಳ ಪರವಾಗಿ ದೋಷಪರಿಹಾರ ಮಾಡುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನು ಒಂದನ್ನು ಪಾಪ ಪರಿಹಾರದ ಬಲಿಗಾಗಿಯೂ, ಇನ್ನೊಂದನ್ನು ದಹನಬಲಿಗಾಗಿಯೂ ಸಮರ್ಪಿಸಬೇಕು, ಯಾಜಕನು ಅವಳಿಗಾಗಿ ಅವಳ ಅಶುದ್ಧತೆಯ ಸ್ರಾವದ ವಿಷಯದಲ್ಲಿ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತ ಮಾಡಬೇಕು.