Leviticus 16:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಚೀಟು ಹಾಕುವುದರ ಮೂಲಕ ಅಜಾಜೇಲನಿಗಾಗಿ ಆರಿಸಲ್ಪಟ್ಟ ಹೋತವನ್ನು ಜೀವಂತವಾಗಿ ಯೆಹೋವನ ಸನ್ನಿಧಿಗೆ ತರಬೇಕು ಮತ್ತು ಈ ಹೋತವನ್ನು ಮರುಭೂಮಿಯಲ್ಲಿರುವ ಅಜಾಜೇಲನಿಗೆ ಕಳುಹಿಸಬೇಕು. ಜನರಿಗೋಸ್ಕರ ಪ್ರಾಯಶ್ಚಿತ್ತ ಮಾಡಲು ಹೀಗೆ ಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವ ಹೋತ ಅಜಾಜೇಲನದೆಂದು ಗೊತ್ತಾಗುವುದೋ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ, ಅದರ ಮೇಲೆ ದೋಷವನ್ನು ಹೊರಿಸಿ ಅರಣ್ಯಕ್ಕೆ ಅಜಾಜೇಲನಿಗಾಗಿ ಬಿಡಬೇಕು.
Kannada BSI Bible 2016
ಆದರೆ ಪಾಪ ಪಶುವಿಗಾಗಿ ಚೀಟು ಬಿದ್ದ ಆ ಆಡನ್ನು ತನ್ನೊಂದಿಗೆ ಪ್ರಾಯಶ್ಚಿತ್ತಮಾಡುವದ ಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಸಜೀವವಾಗಿ ನಿಲ್ಲಿಸಿ ಅದನ್ನು ಪಾಪ ಪಶುವಾಗಿ ಕಾಡಿನಲ್ಲಿ ಹೋಗುವಂತೆ ಬಿಟ್ಟುಬಿಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವ ಹೋತ ಅಜಾಜೇಲನದೆಂದು ಗೊತ್ತಾಗುವದೋ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ ಅದರ ಮೇಲೆ ದೋಷಹೊರಿಸಿ ಅರಣ್ಯಕ್ಕೆ ಅಜಾಜೇಲನಿಗಾಗಿ ಬಿಡಿಸಿಬಿಡಬೇಕು.
Kannada Bible (KNCL) BSI 2016
ಯಾವ ಹೋತ ಅಜಾಜೇಲನದೆಂದು ಗೊತ್ತಾಗುವುದೋ ಅದನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ, ಅದರ ಮೇಲೆ ದೋಷ ಹೊರಿಸಿ, ಮರುಭೂಮಿಗೆ ಅಜಾಜೇಲನಿಗಾಗಿ ಬಿಡಿಸಿಬಿಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಬಲಿಪಶುವಿಗಾಗಿ ಚೀಟು ಬಿದ್ದ ಆ ಹೋತವನ್ನು ತನ್ನೊಂದಿಗೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ಸಜೀವವಾಗಿ ನಿಲ್ಲಿಸಿ, ಅದನ್ನು ಬಲಿಪಶುವಾಗಿ ಕಾಡಿನಲ್ಲಿ ಹೋಗುವಂತೆ ಬಿಟ್ಟುಬಿಡಬೇಕು.