Leviticus 16:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಅವನು ಯೆಹೋವನ ಸನ್ನಿಧಿಯಲ್ಲಿರುವ ವೇದಿಕೆಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತೆಗೆದುಕೊಳ್ಳಬೇಕು. ಆರೋನನು ಪರಿಮಳ ಧೂಪ ದ್ರವ್ಯದ ಪುಡಿಯಲ್ಲಿ ಎರಡು ಹಿಡಿ ತೆಗೆದುಕೊಳ್ಳುವನು. ಆರೋನನು ಆ ಧೂಪವನ್ನು ತೆರೆಯ ಹಿಂದೆ ಇರುವ ಕೋಣೆಗೆ ತೆಗೆದುಕೊಂಡು ಬರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನಗೋಸ್ಕರ ಹೋರಿಯನ್ನು ವಧಿಸಿದ ಮೇಲೆ ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ, ಪರಿಮಳಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ಅವುಗಳನ್ನು ತೆರೆಯೊಳಗೆ ತರಬೇಕು.
Kannada BSI Bible 2016
ಅವನು ಕರ್ತನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಧೂಪ ಸುಡುವ ಪಾತ್ರೆಯ ತುಂಬ ಬೆಂಕಿಯಿಂದ ಉರಿಯುವ ಕೆಂಡ ಗಳನ್ನು ಮತ್ತು ತನ್ನ ಕೈಗಳ ತುಂಬ ಸಣ್ಣದಾಗುವಂತೆ ಕಟ್ಟಿದ ಧೂಪವನ್ನು ತೆಗೆದುಕೊಂಡು ಅದನ್ನು ತೆರೆಯ ಒಳಗಡೆ ತರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನಗೋಸ್ಕರವಾದ ಹೋರಿಯನ್ನು ವಧಿಸಿದ ಮೇಲೆ ಯೆಹೋವನ ಸನ್ನಿಧಿಯಲ್ಲಿರುವ ವೇದಿಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ ಪರಿಮಳಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ತೆರೆಯನ್ನು ದಾಟಿ
Kannada Bible (KNCL) BSI 2016
ಅವನು ತನಗೋಸ್ಕರವಾದ ಆ ಹೋರಿಯನ್ನು ವಧಿಸಿದ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ವೇದಿಕೆಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ ಪರಿಮಳ ಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ತೆರೆಯನ್ನು ದಾಟಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಯೆಹೋವ ದೇವರ ಸನ್ನಿಧಿಯಲ್ಲಿರುವ ಬಲಿಪೀಠದಿಂದ ಬೆಂಕಿಯ ಕೆಂಡಗಳನ್ನು ಧೂಪ ಸುಡುವ ಪಾತ್ರೆಯಲ್ಲಿ ತುಂಬಿಸಿ, ತನ್ನ ಎರಡು ಕೈತುಂಬ ಪರಿಮಳ ಧೂಪದ್ರವ್ಯದ ಚೂರ್ಣವನ್ನು ತೆಗೆದುಕೊಂಡು, ತೆರೆಯನ್ನು ದಾಟಿ ತರಬೇಕು.