Leviticus 16:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆರೋನನು ಯೆಹೋವನ ಸನ್ನಿಧಿಯಲ್ಲಿ ಬೆಂಕಿಯ ಮೇಲೆ ಧೂಪವನ್ನು ಹಾಕಬೇಕು. ಆಗ ಒಡಂಬಡಿಕೆಯ ಪೆಟ್ಟಿಗೆ ಮೇಲಿರುವ ಕೃಪಾಸವನ್ನು ಧೂಪದ ಹೊಗೆಯು ಮುಚ್ಚಿಕೊಳ್ಳುವುದು. ಹೀಗೆ ಮಾಡುವುದರಿಂದ ಆರೋನನು ಸಾಯುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಆ ಧೂಪವನ್ನು ಯೆಹೋವನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಆ ಧೂಪದ ಹೊಗೆಯು ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಆವರಿಸಿಕೊಳ್ಳುವುದು.
Kannada BSI Bible 2016
ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕೃಪಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಕರ್ತನ ಎದುರಿನಲ್ಲಿ ಉರಿಯುವ ಕೆಂಡಗಳ ಮೇಲೆ ಹಾಕಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಧೂಪವನ್ನು ಯೆಹೋವನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಧೂಪದ ಹೊಗೆ ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಮುಚ್ಚುವದು.
Kannada Bible (KNCL) BSI 2016
ಆ ಧೂಪವನ್ನು ಸರ್ವೇಶ್ವರನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಧೂಪದ ಹೊಗೆ ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಮುಚ್ಚುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕರುಣಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಯೆಹೋವ ದೇವರ ಎದುರಿನಲ್ಲಿ ಬೆಂಕಿಯ ಮೇಲೆ ಹಾಕಬೇಕು.