Leviticus 16:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಬಳಿಕ ಆರೋನನು ಜನರಿಗೋಸ್ಕರವಾಗಿರುವ ಪಾಪಪರಿಹಾರಕ ಪಶುವಾದ ಹೋತವನ್ನು ವಧಿಸಬೇಕು. ಆರೋನನು ಈ ಹೋತದ ರಕ್ತವನ್ನು ತೆರೆಯ ಹಿಂಭಾಗದಲ್ಲಿರುವ ಕೋಣೆಗೆ ತೆಗೆದುಕೊಂಡು ಬರಬೇಕು. ಆರೋನನು ಹೋರಿಯ ರಕ್ತದಿಂದ ಮಾಡಿದಂತೆ ಹೋತದ ರಕ್ತದಿಂದಲೂ ಮಾಡಬೇಕು. ಆರೋನನು ಹೋತದ ರಕ್ತವನ್ನು ಕೃಪಾಸನದ ಮೇಲೂ ಮತ್ತು ಕೃಪಾಸನದ ಮುಂಭಾಗದಲ್ಲಿಯೂ ಚಿಮಿಕಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ತರುವಾಯ ಅವನು ಜನರಿಗಾಗಿ ಮಾಡಿದ ದೋಷಪರಿಹಾರಕ ಯಜ್ಞದ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯೊಳಗೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ, ಕೃಪಾಸನದ ಮೇಲೆಯೂ ಮತ್ತು ಅದರ ಎದುರಾಗಿಯೂ ಚಿಮುಕಿಸಬೇಕು.
Kannada BSI Bible 2016
ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಅವನು ಜನರಿಗೋಸ್ಕರವಾದ ದೋಷಪರಿಹಾರಕಯಜ್ಞದ ಹೋತವನ್ನು ವಧಿಸಿ ಅದರ ರಕ್ತವನ್ನು ತೆರೆಯೊಳಗೆ ತಂದು ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ ಕೃಪಾಸನದ ಮೇಲೆಯೂ ಎದುರಾಗಿಯೂ ಚಿವಿುಕಿಸಬೇಕು.
Kannada Bible (KNCL) BSI 2016
ತರುವಾಯ ಅವನು ಜನರ ಪರವಾಗಿ ದೋಷಪರಿಹಾರಕ ಬಲಿಯ ಹೋತವನ್ನು ವಧಿಸಿ ಅದರ ರಕ್ತವನ್ನು ತೆರೆಯೊಳಗೆ ತಂದು ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ ಕೃಪಾಸನದ ಮೇಲೆಯೂ ಎದುರಾಗಿಯೂ ಚಿಮುಕಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ತರುವಾಯ ಅವನು ಜನರಿಗೋಸ್ಕರ ಪಾಪ ಪರಿಹಾರದ ಬಲಿಯಾಗಿರುವ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯ ಒಳಗಡೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಕರುಣಾಸನದ ಮೇಲೆಯೂ, ಕರುಣಾಸನದ ಮುಂದೆಯೂ ಚಿಮುಕಿಸಬೇಕು.