Leviticus 16:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆರೋನನು ಮಹಾ ಪವಿತ್ರಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡಲು ದೇವದರ್ಶನಗುಡಾರದೊಳಗೆ ಹೋದ ಸಮಯದಿಂದ ಅವನು ಬರುವ ತನಕ ಗುಡಾರದೊಳಗೆ ಯಾರೂ ಇರಕೂಡದು. ಆರೋನನು ಬರುವ ತನಕ ಯಾರೂ ಒಳಗೆ ಹೋಗಕೂಡದು. ಹೀಗೆ ಆರೋನನು ತನಗಾಗಿಯೂ ತನ್ನ ಕುಟುಂಬಕ್ಕಾಗಿಯೂ ಇಡೀ ಇಸ್ರೇಲ್ ಸಮೂಹಕ್ಕಾಗಿಯೂ ಪ್ರಾಯಶ್ಚಿತ್ತ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ದೋಷಪರಿಹಾರ ಮಾಡುವುದಕ್ಕಾಗಿ ಮಹಾ ಪವಿತ್ರಸ್ಥಾನದೊಳಗೆ ಹೋಗಿ ಹೊರಗೆ ಬರುವ ತನಕ ಯಾರೂ ದೇವದರ್ಶನದ ಗುಡಾರದಲ್ಲಿ ಹೋಗಬಾರದು. ಹಾಗೆ ತನಗಾಗಿಯೂ, ತನ್ನ ಮನೆತನದವರಿಗಾಗಿಯೂ ಮತ್ತು ಇಸ್ರಾಯೇಲರ ಎಲ್ಲಾ ಜನಸಮೂಹಕ್ಕಾಗಿಯೂ ದೋಷಪರಿಹಾರ ಮಾಡುವನು.
Kannada BSI Bible 2016
ಅವನು ಪ್ರಾಯಶ್ಚಿತ್ತಮಾಡುವದಕ್ಕಾಗಿ ಪರಿಶುದ್ಧ ಸ್ಥಳಕ್ಕೆ ಹೋಗಿರುವಾಗ ತನಗೋಸ್ಕರವೂ ತನ್ನ ಮನೆಯ ವರೆಲ್ಲರಿಗೋಸ್ಕರವೂ ಇಸ್ರಾಯೇಲ್ಯರ ಸಭೆ ಯವರೆಲ್ಲರಿಗೋಸ್ಕರವೂ ಪ್ರಾಯಶ್ಚಿತ್ತಮಾಡಿ ಹೊರಗೆ ಬರುವ ತನಕ ಸಭೆಯ ಗುಡಾರದಲ್ಲಿ ಒಬ್ಬ ಮನುಷ್ಯನಾದರೂ ಇರಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ದೋಷಪರಿಹಾರಮಾಡುವದಕ್ಕಾಗಿ ಮಹಾಪವಿತ್ರಸ್ಥಾನದೊಳಗೆ ಹೋಗಿ ಹೊರಗೆ ಬರುವ ತನಕ ಯಾರೂ ದೇವದರ್ಶನದ ಗುಡಾರದಲ್ಲಿ ಹೋಗಕೂಡದು. ಹಾಗೆ ತನಗೋಸ್ಕರವಾಗಿಯೂ ತನ್ನ ಮನೆತನದವರಿಗೋಸ್ಕರವಾಗಿಯೂ ಇಸ್ರಾಯೇಲ್ಯರ ಎಲ್ಲಾ ಜನಸಮೂಹಕ್ಕೋಸ್ಕರವಾಗಿಯೂ ದೋಷಪರಿಹಾರಮಾಡುವನು.
Kannada Bible (KNCL) BSI 2016
ಅವನು ದೋಷಪರಿಹಾರ ಮಾಡುವುದಕ್ಕಾಗಿ ಮಹಾಪವಿತ್ರಸ್ಥಾನದೊಳಗೆ ಹೋಗಿ ಹೊರಗೆ ಬರುವ ತನಕ ಯಾರೂ ದೇವದರ್ಶನದ ಗುಡಾರದೊಳಗೆ ಹೋಗಕೂಡದು. ಹಾಗೆ ತನ್ನ ಹಾಗು ಮನೆತನದವರ ಪರವಾಗಿ ಮತ್ತು ಇಸ್ರಯೇಲರ ಇಡೀ ಸಮಾಜದ ಪರವಾಗಿ ಪ್ರಾಯಶ್ಚಿತ್ತ ಮಾಡುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಮಹಾಪರಿಶುದ್ಧ ಸ್ಥಳಕ್ಕೆ ಹೋಗಿರುವಾಗ ತನಗೋಸ್ಕರವೂ, ತನ್ನ ಮನೆಯವರಿಗೆಲ್ಲರಿಗೋಸ್ಕರವೂ, ಇಸ್ರಾಯೇಲರ ಸಭೆಯವರೆಲ್ಲರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಿ ಹೊರಗೆ ಬರುವ ತನಕ ದೇವದರ್ಶನದ ಗುಡಾರದಲ್ಲಿ ಒಬ್ಬ ಮನುಷ್ಯನೂ ಇರಬಾರದು.