Leviticus 16:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತರುವಾಯ ಆರೋನನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಕೆಯ ಬಳಿಗೆ ಹೋಗುವನು. ಆರೋನನು ಯಜ್ಞವೇದಿಕೆಯನ್ನು ಶುದ್ಧೀಕರಿಸುವನು. ಆರೋನನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ಮತ್ತು ಹೋತದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಕೆಯ ಎಲ್ಲಾ ಮೂಲೆಗಳಿಗೆ ಹಚ್ಚುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಅವನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲಿಯೂ ಹಾಗೂ ಆ ಹೋತದ ರಕ್ತದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು.
Kannada BSI Bible 2016
ಇದಲ್ಲದೆ ಅವನು ಕರ್ತನ ಎದುರಿನಲ್ಲಿರುವ ಯಜ್ಞವೇದಿಯ ಬಳಿಗೆ ಬಂದು ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನುಮಾಡಬೇಕು; ಹೋರಿಯ ರಕ್ತವನ್ನೂ ಆಡಿನ ರಕ್ತವನ್ನೂ ತೆಗೆದು ಕೊಂಡು ಯಜ್ಞವೇದಿಯ ಸುತ್ತಲೂ ಇರುವ ಕೊಂಬು ಗಳಿಗೆ ಹಚ್ಚಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಅವನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲಿಯೂ ಆ ಹೋತನ ರಕ್ತದಲ್ಲಿಯೂ ಸ್ವಲ್ಪ ಸ್ವಲ್ಪ ತೆಗೆದುಕೊಂಡು ವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು.
Kannada Bible (KNCL) BSI 2016
ತರುವಾಯ ಅವನು ಹೊರಗೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿರುವ ಬಲಿಪೀಠದ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲೂ ಆ ಹೋತದ ರಕ್ತದಲ್ಲೂ ಸ್ವಲ್ಪ ಸ್ವಲ್ಪತೆಗೆದುಕೊಂಡು ಪೀಠದ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವನು ಯೆಹೋವ ದೇವರ ಎದುರಿನಲ್ಲಿರುವ ಬಲಿಪೀಠದ ಬಳಿಗೆ ಬಂದು, ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಹೋರಿಯ ರಕ್ತವನ್ನೂ, ಹೋತದ ರಕ್ತವನ್ನೂ ತೆಗೆದುಕೊಂಡು ಬಲಿಪೀಠದ ಸುತ್ತಲೂ ಇರುವ ಕೊಂಬುಗಳಿಗೆ ಹಚ್ಚಬೇಕು.