Leviticus 16:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಹೇಳಿದ್ದೇನೆಂದರೆ: “ನಿನ್ನ ಸಹೋದರನಾದ ಆರೋನನೊಡನೆ ಮಾತಾಡು. ಅವನು ತನಗೆ ಇಷ್ಟಬಂದಾಗಲೆಲ್ಲಾ ತೆರೆಯ ಹಿಂದಿರುವ ಮಹಾ ಪವಿತ್ರಸ್ಥಳದೊಳಕ್ಕೆ ಹೋಗಬಾರದೆಂದು ಅವನಿಗೆ ಹೇಳು. ಆ ತೆರೆಯ ಹಿಂದೆ ಇರುವ ಕೋಣೆಯೊಳಗೆ ಪವಿತ್ರ ಪೆಟ್ಟಿಗೆಯು ಇರುತ್ತದೆ. ಕೃಪಾಸನವು ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿರುತ್ತದೆ. ಕೃಪಾಸನದ ಮೇಲೆ ಮೇಘದಲ್ಲಿ ನಾನು ಕಾಣಿಸಿಕೊಳ್ಳುತ್ತೇನೆ. ಆರೋನನು ಆ ಕೋಣೆಯೊಳಗೆ ಹೋದರೆ ಸಾಯುವನು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರವಾದ ಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವುದರಿಂದ ಅವನು ನಾಶವಾಗುವನು.
Kannada BSI Bible 2016
ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮೋಶೆಯ ಸಂಗಡ ಮಾತಾಡಿ ಹೇಳಿದ್ದೇನಂದರೆ - ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವದರಿಂದ ಅವನು ನಾಶವಾದಾನು.
Kannada Bible (KNCL) BSI 2016
ಮೋಶೆಯ ಸಂಗಡ ಸರ್ವೇಶ್ವರ ಮಾತಾಡಿ ಹೇಳಿದ್ದೇನೆಂದರೆ - “ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ, ಮಹಾಪವಿತ್ರ ಸ್ಥಾನದೊಳಕ್ಕೆ ಮಂಜೂಷದ ಮೇಲಿನ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ಬಂದರೆ ನಾಶವಾಗುವನು. ಏಕೆಂದರೆ ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನಿನ್ನ ಅಣ್ಣನಾದ ಆರೋನನು ಮಂಜೂಷದ ಮೇಲಿರುವ ಕರುಣಾಸನದ ಮುಂದಿರುವ ತೆರೆಯ ಒಳಗೆ ಮಹಾಪರಿಶುದ್ಧ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ, ಇಲ್ಲವಾದರೆ ಅವನು ಸಾಯುತ್ತಾನೆ, ಏಕೆಂದರೆ ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.