Leviticus 16:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಬಳಿಕ ಆರೋನನು ದೇವದರ್ಶನಗುಡಾರವನ್ನು ಪ್ರವೇಶಿಸುವನು. ಅವನು ಪವಿತ್ರಸ್ಥಳದೊಳಗೆ ಹೋಗಿದ್ದಾಗ ಧರಿಸಿಕೊಂಡಿದ್ದ ನಾರುಬಟ್ಟೆಯನ್ನು ತೆಗೆದುಹಾಕುವನು. ಅವನು ಈ ಬಟ್ಟೆಗಳನ್ನು ಅಲ್ಲಿಯೇ ಬಿಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ತರುವಾಯ ಆರೋನನು ದೇವದರ್ಶನದ ಗುಡಾರದೊಳಗೆ ಬಂದು ತಾನು ಮಹಾಪವಿತ್ರಸ್ಥಾನದೊಳಗೆ ಹೋಗುವುದಕ್ಕಾಗಿ ಧರಿಸಿಕೊಂಡಿದ್ದ ನಾರುಮಡಿಗಳನ್ನು ತೆಗೆದು ಅಲ್ಲೇ ಇಡಬೇಕು.
Kannada BSI Bible 2016
ಆರೋನನು ಸಭೆಯ ಗುಡಾರದೊಳಗೆ ಬಂದು ತಾನು ಪರಿಶುದ್ಧ ಸ್ಥಳದೊಳಕ್ಕೆ ಹೋಗುವಾಗ ತೊಟ್ಟು ಕೊಂಡಿದ್ದ ನಾರಿನ ಬಟ್ಟೆಗಳನ್ನು ತೆಗೆದುಹಾಕಿ ಅವುಗ ಳನ್ನು ಅಲ್ಲಿಯೇ ಬಿಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಆರೋನನು ದೇವದರ್ಶನದ ಗುಡಾರದೊಳಗೆ ಬಂದು ತಾನು ಮಹಾಪವಿತ್ರಸ್ಥಾನದೊಳಗೆ ಹೋಗುವದಕ್ಕಾಗಿ ಧರಿಸಿಕೊಂಡಿದ್ದ ನಾರುಮಡಿಗಳನ್ನು ತೆಗೆದು ಅಲ್ಲೇ ಇಟ್ಟುಬಿಟ್ಟು ಪ್ರಾಕಾರದಲ್ಲಿ ಸ್ನಾನಮಾಡಿ ತನ್ನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು.
Kannada Bible (KNCL) BSI 2016
ತರುವಾಯ ಆರೋನನು ದೇವದರ್ಶನದ ಗುಡಾರದೊಳಗೆ ಬಂದು, ತಾನು ಮಹಾಪವಿತ್ರಸ್ಥಾನದೊಳಗೆ ಹೋಗುವುದಕ್ಕಾಗಿ ಧರಿಸಿಕೊಂಡಿದ್ದ ನಾರುಮಡಿಗಳನ್ನು ತೆಗೆದು ಅಲ್ಲೇ ಇಟ್ಟು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆರೋನನು ದೇವದರ್ಶನದ ಗುಡಾರದೊಳಗೆ ಬಂದು, ತಾನು ಮಹಾಪರಿಶುದ್ಧ ಸ್ಥಳದೊಳಕ್ಕೆ ಹೋಗುವಾಗ ತೊಟ್ಟುಕೊಂಡಿದ್ದ ನಾರಿನ ಬಟ್ಟೆಗಳನ್ನು ತೆಗೆದುಹಾಕಿ ಅವುಗಳನ್ನು ಅಲ್ಲಿಯೇ ಬಿಡಬೇಕು.