Leviticus 16:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ತನ್ನ ಶರೀರವನ್ನು ಪವಿತ್ರಸ್ಥಳದಲ್ಲಿ ನೀರಿನಿಂದ ತೊಳೆದುಕೊಳ್ಳುವನು. ಬಳಿಕ ಅವನು ತನ್ನ ಇತರ ವಿಶೇಷ ಬಟ್ಟೆಗಳನ್ನು ಧರಿಸಿಕೊಳ್ಳುವನು. ಅವನು ಹೊರಗೆ ಬಂದು, ತನ್ನ ಸರ್ವಾಂಗಹೋಮವನ್ನು ಮತ್ತು ಜನರ ಸರ್ವಾಂಗಹೋಮವನ್ನು ಅರ್ಪಿಸುವನು. ಅವನು ತನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಪವಿತ್ರ ಸ್ಥಳದ ಪ್ರಾಕಾರದಲ್ಲಿ ಸ್ನಾನಮಾಡಿ, ತನ್ನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಆಗ ಅವನು ಹೊರಗೆ ಬಂದು ತನಗಾಗಿಯೂ ಮತ್ತು ಜನಸಮೂಹಕ್ಕಾಗಿಯೂ ಸರ್ವಾಂಗಹೋಮಗಳನ್ನು ಸಮರ್ಪಿಸಿ, ತನಗಾಗಿಯೂ ಮತ್ತು ಜನರಿಗಾಗಿಯೂ ದೋಷಪರಿಹಾರ ಮಾಡಬೇಕು.
Kannada BSI Bible 2016
ಅವನು ಪರಿಶುದ್ಧ ಸ್ಥಳದಲ್ಲಿ ತನ್ನ ಶರೀರವನ್ನು ನೀರಿನಿಂದ ತೊಳೆದು ತನ್ನ ಬಟ್ಟೆಗಳನ್ನು ಧರಿಸಿಕೊಂಡು ಹೊರಗೆ ಬಂದು ತನ್ನ ದಹನಬಲಿಯನ್ನೂ ಜನರ ದಹನಬಲಿಯನ್ನೂ ಸಮ ರ್ಪಿಸಿ ತನಗೋಸ್ಕರವೂ ಜನರಿಗೋಸ್ಕರವೂ ಪ್ರಾಯ ಶ್ಚಿತ್ತಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನು ಹೊರಗೆ ಬಂದು ತನಗೋಸ್ಕರವೂ ಜನಸಮೂಹಕ್ಕೋಸ್ಕರವೂ ಸರ್ವಾಂಗಹೋಮಗಳನ್ನು ಸಮರ್ಪಿಸಿ ತನಗೋಸ್ಕರವಾಗಿಯೂ ಜನರಿಗೋಸ್ಕರವಾಗಿಯೂ ದೋಷಪರಿಹಾರಮಾಡಬೇಕು.
Kannada Bible (KNCL) BSI 2016
ಪ್ರಾಕಾರದಲ್ಲಿ ಸ್ನಾನಮಾಡಿ ತನ್ನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಆಗ ಅವನು ಹೊರಗೆ ಬಂದು ತನ್ನ ಹಾಗು ಜನಸಮೂಹದ ಪರವಾಗಿ ದಹನಬಲಿಗಳನ್ನು ಸಮರ್ಪಿಸಿ ತನ್ನ ಮತ್ತು ಜನರ ಪರವಾಗಿ ಪ್ರಾಯಶ್ಚಿತ್ತ ವಿಧಿಯನ್ನು ನೆರವೇರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಪರಿಶುದ್ಧ ಸ್ಥಳದಲ್ಲಿ ನೀರಿನಲ್ಲಿ ಸ್ನಾನಮಾಡಿ, ತನ್ನ ಬಳಕೆಯ ಬಟ್ಟೆಗಳನ್ನು ಧರಿಸಿಕೊಂಡು, ಹೊರಗೆ ಬಂದು ತನ್ನ ದಹನಬಲಿಯನ್ನೂ, ಜನರ ದಹನಬಲಿಯನ್ನೂ ಸಮರ್ಪಿಸಿ ತನಗೋಸ್ಕರವೂ, ಜನರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು.