Leviticus 16:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಪಾಪಪರಿಹಾರಕ ಯಜ್ಞಕ್ಕಾಗಿ ಇರುವ ಹೋರಿಯನ್ನು ಮತ್ತು ಹೋತವನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಬೇಕು. (ಆ ಪಶುಗಳ ರಕ್ತವನ್ನು, ಪವಿತ್ರವಸ್ತುಗಳನ್ನು ಶುದ್ಧೀಕರಿಸುವುದಕ್ಕೆ ಪವಿತ್ರಸ್ಥಳಕ್ಕೆ ತರಲಾಯಿತು.) ಯಾಜಕರು ಆ ಪಶುಗಳ ಚರ್ಮ, ಮಾಂಸ ಮತ್ತು ದೇಹದ ಕಲ್ಮಶವನ್ನೆಲ್ಲಾ ಬೆಂಕಿಯಿಂದ ಸುಟ್ಟುಹಾಕಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೋಷಪರಿಹಾರಕ ಯಜ್ಞಪಶುಗಳಾದ ಹೋರಿ ಮತ್ತು ಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವುದಕ್ಕಾಗಿ ತಂದ ಮೇಲೆ ಅವುಗಳ ಶರೀರಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ, ಚರ್ಮ, ಮಾಂಸ ಮತ್ತು ಕಲ್ಮಷಗಳೆಲ್ಲವನ್ನು ಬೆಂಕಿಯಿಂದ ಸುಡಿಸಬೇಕು.
Kannada BSI Bible 2016
ಇದಲ್ಲದೆ ಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಯಾವದರ ರಕ್ತವು ತರಲ್ಪಟ್ಟಿತೋ ಆ ಪಾಪಬಲಿಯ ಹೋರಿಯನ್ನು ಮತ್ತು ಪಾಪಬಲಿಯ ಆಡನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಅವುಗಳ ಚರ್ಮವನ್ನೂ ಮಾಂಸವನ್ನೂ ಸಗಣಿಯನ್ನೂ ಸುಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೋಷಪರಿಹಾರಕಯಜ್ಞಪಶುಗಳಾದ ಹೋರಿಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವದಕ್ಕಾಗಿ ತಂದ ಮೇಲೆ ಅವುಗಳ ಶರೀರಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಚರ್ಮಮಾಂಸ ಕಲ್ಮಷಗಳೆಲ್ಲವನ್ನೂ ಬೆಂಕಿಯಿಂದ ಸುಡಿಸಿಬಿಡಬೇಕು.
Kannada Bible (KNCL) BSI 2016
ದೋಷಪರಿಹಾರಕ ಬಲಿಪ್ರಾಣಿಗಳಾದ ಹೋರಿಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವುದಕ್ಕಾಗಿ ತಂದ ಮೇಲೆ ಅವುಗಳ ದೇಹಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಚರ್ಮಮಾಂಸ ಕಲ್ಮಷಗಳೆಲ್ಲವನ್ನೂ ಬೆಂಕಿಯಿಂದ ಸುಡಿಸಿಬಿಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಮಹಾಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯಾವುದರ ರಕ್ತವು ತರಲಾಗಿತ್ತೋ, ಆ ಪಾಪ ಪರಿಹಾರದ ಬಲಿಯ ಹೋರಿಯನ್ನು ಮತ್ತು ದೋಷಪರಿಹಾರ ಬಲಿಯ ಹೋತವನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಅವುಗಳ ಚರ್ಮವನ್ನೂ, ಮಾಂಸವನ್ನೂ, ಸಗಣಿಯನ್ನೂ ಸುಡಬೇಕು.