Leviticus 16:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೆಂದರೆ ಈ ದಿನದಲ್ಲಿ ಯಾಜಕನು ನಿಮ್ಮನ್ನು ಶುದ್ಧೀಕರಿಸಲು ನಿಮಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ನೀವು ಯೆಹೋವನಿಗಾಗಿ ನಿಮ್ಮ ಎಲ್ಲಾ ಪಾಪಗಳಿಂದ ಬಿಡುಗಡೆಯಾಗಿ ಪರಿಶುದ್ಧರಾಗುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ನೀವು ಪರಿಶುದ್ಧರಾಗುವುದಕ್ಕಾಗಿ ಈ ದಿನದಲ್ಲಿ ನಿಮಗೋಸ್ಕರ ದೋಷಪರಿಹಾರವಾಗುವುದು, ಯೆಹೋವನ ದೃಷ್ಟಿಯಲ್ಲಿ ನಿಮ್ಮ ಎಲ್ಲಾ ದೋಷಗಳು ನಿವಾರಣೆಯಾಗುವವು.
Kannada BSI Bible 2016
ಯಾಕಂದರೆ ನೀವು ಕರ್ತನ ಸನ್ನಿಧಿಯಲ್ಲಿ ನಿಮ್ಮ ಎಲ್ಲಾ ಪಾಪಗಳಿಂದ ಶುದ್ಧರಾಗಿರುವಂತೆ ನಿಮ್ಮನ್ನು ಶುದ್ಧೀಕರಿಸುವ ಹಾಗೆ ಆ ದಿನದಲ್ಲಿ ಯಾಜಕನು ನಿಮಗೋಸ್ಕರ ಪ್ರಾಯಶ್ಚಿತ್ತ ವನ್ನು ಮಾಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ನೀವು ಪರಿಶುದ್ಧರಾಗುವದಕ್ಕಾಗಿ ಈ ದಿನದಲ್ಲಿ ನಿಮಗೋಸ್ಕರ ದೋಷಪರಿಹಾರವಾಗುವದು, ಯೆಹೋವನ ದೃಷ್ಟಿಯಲ್ಲಿ ನಿಮ್ಮ ಎಲ್ಲಾ ದೋಷಗಳು ನಿವಾರಣೆಯಾಗುವವು.
Kannada Bible (KNCL) BSI 2016
ಏಕೆಂದರೆ ನೀವು ಪರಿಶುದ್ಧರಾಗುವಂತೆ ಈ ದಿನ ನಿಮ್ಮ ಪರವಾಗಿ ಪ್ರಾಯಶ್ಚಿತ್ತ ಮಾಡಲಾಗುವುದು. ಸರ್ವೇಶ್ವರನ ದೃಷ್ಟಿಯಲ್ಲಿ ನಿಮ್ಮ ಎಲ್ಲಾ ದೋಷಗಳು ನಿವಾರಣೆಯಾಗುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಯೆಹೋವ ದೇವರ ಸನ್ನಿಧಿಯಲ್ಲಿ ನಿಮ್ಮ ಎಲ್ಲಾ ಪಾಪಗಳಿಂದ ಶುದ್ಧರಾಗಿರುವಂತೆ ನಿಮ್ಮನ್ನು ಶುದ್ಧೀಕರಿಸುವ ಹಾಗೆ, ಆ ದಿನದಲ್ಲಿ ಯಾಜಕನು ನಿಮಗೋಸ್ಕರ ಪ್ರಾಯಶ್ಚಿತ್ತವನ್ನು ಮಾಡುವನು.