Leviticus 16:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದ್ದರಿಂದ ಪ್ರಧಾನಯಾಜಕನಾಗಿ ಆರಿಸಲ್ಪಟ್ಟವನು ವಸ್ತುಗಳನ್ನು ಶುದ್ಧೀಕರಿಸಲು ಈ ಆಚರಣೆಯನ್ನು ಮಾಡಬೇಕು. ಈತನು ತನ್ನ ತಂದೆಯ ನಂತರ ಪ್ರಧಾನಯಾಜಕನಾಗಿ ಸೇವೆಮಾಡುವುದಕ್ಕೆ ನೇಮಿಸಲ್ಪಟ್ಟವನಾಗಿದ್ದಾನೆ. ಆ ಯಾಜಕನು ಪವಿತ್ರವೂ ಶ್ರೇಷ್ಠವೂ ಆಗಿರುವ ನಾರುಬಟ್ಟೆಯನ್ನು ಧರಿಸಿಕೊಳ್ಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆರೋನನ ವಂಶದವರಲ್ಲಿ ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಸೇವಾವೃತ್ತಿಯನ್ನು ನಡೆಸುವುದಕ್ಕೆ ಪಟ್ಟಾಭಿಷೇಕವಾಗುವುದೋ ಅವನೇ ಈ ದೋಷಪರಿಹಾರ ಕಾರ್ಯವನ್ನು ಆಚರಿಸಬೇಕು. ಅವನೇ ಆ ಪರಿಶುದ್ಧವಾದ ನಾರುಮಡಿಗಳನ್ನು ಧರಿಸಿಕೊಳ್ಳಬೇಕು.
Kannada BSI Bible 2016
ಯಾವನು ತನ್ನ ತಂದೆಯ ಬದಲಾಗಿ ಯಾಜಕ ಉದ್ಯೋಗಕ್ಕೋಸ್ಕರ ಅಭಿಷೇಕಿಸಲ್ಪಟ್ಟವನಾಗಿ ಪ್ರತಿಷ್ಠಿಸ ಲ್ಪಟ್ಟಿದ್ದಾನೋ ಆ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
[ಆರೋನನ ವಂಶದವರಲ್ಲಿ] ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಉದ್ಯೋಗವನ್ನು ನಡಿಸುವದಕ್ಕೆ ಪಟ್ಟಾಭಿಷೇಕವಾಗುವದೋ ಅವನೇ ಈ ದೋಷಪರಿಹಾರಕಾರ್ಯವನ್ನು ಆಚರಿಸಬೇಕು;
Kannada Bible (KNCL) BSI 2016
ಆರೋನನ ವಂಶದವರಲ್ಲಿ ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಸೇವಾವೃತ್ತಿಯನ್ನು ನಡೆಸುವುದಕ್ಕೆ ಪಟ್ಟಾಭಿಷೇಕವಾಗುವುದೋ ಅವನೇ ಈ ದೋಷಪರಿಹಾರ ಕಾರ್ಯವನ್ನು ನೆರವೇರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವನು ತನ್ನ ತಂದೆಯ ಬದಲಾಗಿ ಮಹಾಯಾಜಕ ಉದ್ಯೋಗಕ್ಕೋಸ್ಕರ ಅಭಿಷಿಕ್ತನಾಗಿ ಪ್ರತಿಷ್ಟಿಸಲಾಗಿದ್ದಾನೋ, ಆ ಮಹಾಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅವನು ಪರಿಶುದ್ಧ ಉಡುಪುಗಳಾದ ನಾರು ಬಟ್ಟೆಗಳನ್ನು ಧರಿಸಿಕೊಳ್ಳಬೇಕು.