Leviticus 16:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಮಹಾ ಪವಿತ್ರಸ್ಥಳ, ದೇವದರ್ಶನಗುಡಾರ ಮತ್ತು ವೇದಿಕೆಯನ್ನು ಶುದ್ಧೀಕರಿಸಬೇಕು; ಅವನು ಯಾಜಕರನ್ನು ಇಸ್ರೇಲರನ್ನು ಶುದ್ಧೀಕರಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ದೇವಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ, ಯಾಜಕರು, ಜನಸಮೂಹದವರು ಈ ಎಲ್ಲರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.
Kannada BSI Bible 2016
ಅವನು ಪರಿಶುದ್ಧ ಉಡುಪುಗಳಾದ ನಾರು ಬಟ್ಟೆಗಳನ್ನು ಧರಿಸಿಕೊಳ್ಳಬೇಕು. ಹೀಗೆ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಇದ ಲ್ಲದೆ ಸಭೆಯ ಗುಡಾರಕ್ಕಾಗಿಯೂ ಯಜ್ಞವೇದಿ ಗಾಗಿಯೂ ಪ್ರಾಯಶ್ಚಿತ್ತಮಾಡಬೇಕು. ಯಾಜಕರಿ ಗಾಗಿಯೂ ಸಭೆಯ ಎಲ್ಲಾ ಜನರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು.ಹೀಗೆ ಇಸ್ರಾಯೇಲಿನ ಮಕ್ಕಳ ಎಲ್ಲಾ ಪಾಪಗಳಿಗಾಗಿ ವರ್ಷಕ್ಕೊಂದಾವರ್ತಿ ಪ್ರಾಯಶ್ಚಿತ್ತಮಾಡುವಂತೆ ಇದು ನಿಮಗೆ ನಿರಂತರ ವಾದ ನಿಯಮವಾಗಿರುವದು ಎಂದು ಹೇಳಿದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನೇ ಆ ನಾರುಮಡಿಗಳನ್ನು ಧರಿಸಿಕೊಂಡು ಪರಿಶುದ್ಧವಾದ ದೇವಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ, ಯಾಜಕರು, ಜನಸಮೂಹದವರು ಈ ಎಲ್ಲರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.
Kannada Bible (KNCL) BSI 2016
ಅವನೇ ಆ ನಾರುಮಡಿಗಳನ್ನು ಧರಿಸಿಕೊಂಡು ಪರಿಶುದ್ಧವಾದ ದೇವಸ್ಥಾನ, ದೇವದರ್ಶನದ ಗುಡಾರ, ಬಲಿಪೀಠ, ಯಾಜಕರು, ಜನಸಮೂಹದವರು ಈ ಎಲ್ಲರ ಪರವಾಗಿ ಪ್ರಾಯಶ್ಚಿತ್ತ ವಿಧಿಯನ್ನು ನೆರವೇರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಅವನು ಮಹಾಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಇದಲ್ಲದೆ ಸಭೆಯ ಗುಡಾರಕ್ಕಾಗಿಯೂ, ಬಲಿಪೀಠಕ್ಕಾಗಿಯೂ ಪ್ರಾಯಶ್ಚಿತ್ತ ಮಾಡಬೇಕು. ಯಾಜಕರಿಗಾಗಿಯೂ, ಸಭೆಯ ಎಲ್ಲಾ ಜನರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು.