Leviticus 16:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರನ್ನು ಶುದ್ಧೀಕರಿಸುವ ಕಟ್ಟಳೆ ಶಾಶ್ವತವಾದದ್ದು. ನೀವು ಆ ಕಾರ್ಯಗಳನ್ನು ವರ್ಷಕ್ಕೊಮ್ಮೆ ಇಸ್ರೇಲರ ಪಾಪಗಳ ದೆಸೆಯಿಂದ ಮಾಡಬೇಕು.” ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಆ ಕಾರ್ಯಗಳನ್ನು ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಎಲ್ಲಾ ದೋಷಗಳನ್ನು ನಿವಾರಣೆಮಾಡುವುದಕ್ಕಾಗಿ ಅವರಿಗೋಸ್ಕರ ವರ್ಷಕ್ಕೆ ಒಂದಾವರ್ತಿ ದೋಷಪರಿಹಾರವನ್ನು ಮಾಡಬೇಕೆಂಬುದೇ ನಿಮಗೆ ಶಾಶ್ವತನಿಯಮ” ಎಂದು ಹೇಳಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.
Kannada BSI Bible 2016
ಹೀಗೆ ಇಸ್ರಾಯೇಲಿನ ಮಕ್ಕಳ ಎಲ್ಲಾ ಪಾಪಗಳಿಗಾಗಿ ವರ್ಷಕ್ಕೊಂದಾವರ್ತಿ ಪ್ರಾಯಶ್ಚಿತ್ತಮಾಡುವಂತೆ ಇದು ನಿಮಗೆ ನಿರಂತರ ವಾದ ನಿಯಮವಾಗಿರುವದು ಎಂದು ಹೇಳಿದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಎಲ್ಲಾ ದೋಷಗಳನ್ನು ನಿವಾರಣೆಮಾಡುವದಕ್ಕಾಗಿ ಅವರಿಗೋಸ್ಕರ ವರುಷಕ್ಕೆ ಒಂದಾವರ್ತಿ ದೋಷಪರಿಹಾರವನ್ನು ಮಾಡಬೇಕೆಂಬದೇ ನಿಮಗೆ ಶಾಶ್ವತನಿಯಮ. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.
Kannada Bible (KNCL) BSI 2016
ಇಸ್ರಯೇಲರ ಎಲ್ಲಾ ದೋಷಗಳನ್ನು ನಿವಾರಣೆಮಾಡುವುದಕ್ಕಾಗಿ ಅವರಿಗೋಸ್ಕರ ವರ್ಷಕ್ಕೆ ಒಂದಾವರ್ತಿ ಪ್ರಾಯಶ್ಚಿತ್ತ ಮಾಡಬೇಕಾದುದು ನಿಮಗೆ ಶಾಶ್ವತ ನಿಯಮವಾಗಿರಬೇಕು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಹೀಗೆ ಇಸ್ರಾಯೇಲರ ಎಲ್ಲಾ ಪಾಪಗಳಿಗಾಗಿ ವರ್ಷಕ್ಕೊಂದಾವರ್ತಿ ಪ್ರಾಯಶ್ಚಿತ್ತ ಮಾಡುವುದು, ನಿಮಗೆ ನಿರಂತರವಾದ ನಿಯಮವಾಗಿರುವುದು,” ಎಂದು ಹೇಳಿದರು. ಯೆಹೋವ ದೇವರು ಆಜ್ಞಾಪಿಸಿದಂತೆಯೇ ಮೋಶೆ ಮಾಡಿದನು.