Leviticus 16:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆರೋನನು ಇಸ್ರೇಲರಿಂದ ಪಾಪಪರಿಹಾರಕ ಯಜ್ಞಕ್ಕಾಗಿ ಎರಡು ಹೋತಗಳನ್ನು ಮತ್ತು ಸರ್ವಾಂಗಹೋಮಕ್ಕಾಗಿ ಒಂದು ಟಗರನ್ನು ತೆಗೆದುಕೊಳ್ಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಜನಸಮೂಹದಿಂದ ದೋಷಪರಿಹಾರಕ ಯಜ್ಞಕ್ಕಾಗಿ ಎರಡು ಹೋತಗಳನ್ನು ಮತ್ತು ಸರ್ವಾಂಗಹೋಮಕ್ಕಾಗಿ ಒಂದು ಟಗರನ್ನು ತೆಗೆದುಕೊಂಡು ಬರಬೇಕು.
Kannada BSI Bible 2016
ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಜನಸಮೂಹದಿಂದ ದೋಷಪರಿಹಾರಕಯಜ್ಞಕ್ಕಾಗಿ ಎರಡು ಹೋತಗಳನ್ನೂ ಸರ್ವಾಂಗಹೋಮಕ್ಕಾಗಿ ಒಂದು ಟಗರನ್ನೂ ತೆಗೆದುಕೊಂಡು ಬರಬೇಕು.
Kannada Bible (KNCL) BSI 2016
ಇಸ್ರಯೇಲರ ಸಮಾಜದಿಂದ ದೋಷಪರಿಹಾರಕ ಬಲಿಗಾಗಿ ಎರಡು ಹೋತಗಳನ್ನೂ ದಹನಬಲಿಗಾಗಿ ಒಂದು ಟಗರನ್ನೂ ತೆಗೆದುಕೊಂಡು ಬರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಇಸ್ರಾಯೇಲರ ಸಭೆಯ ಕಡೆಯಿಂದ ಪಾಪ ಪರಿಹಾರದ ಬಲಿಗಾಗಿ ಎರಡು ಹೋತಗಳನ್ನು, ದಹನಬಲಿಗಾಗಿ ಒಂದು ಟಗರನ್ನೂ ತೆಗೆದುಕೊಳ್ಳಬೇಕು.